download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

`ಆನ’ ಅವತಾರದಲ್ಲಿ ಅದಿತಿ ಪ್ರಭುದೇವ

ಯುಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತ್‌ಕುಮಾರ್ ನಿರ್ಮಾಣ ಮಾಡಿರುವ, ಮನೋಜ್ ಪಿ ನಡಲುಮನೆ ನಿರ್ದೇಶನದ ‘ಆನ’ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನೆರವೇರಿತು.
ಈಗಾಗಲೇ ಭಾರತದ ಮೊದಲ ಮಹಿಳಾ ಸೂಪರ್ ಹೀರೋ ಪರಿಕಲ್ಪನೆಯ ಸಿನಿಮಾ ಎಂದು ಸುದ್ದಿಯಾಗಿರುವ ಈ ಚಿತ್ರದ ಶೀರ್ಷಿಕೆ ಕೂಡ ಅಷ್ಟೇ ವಿಶೇಷವಾಗಿಯೇ ಇದೆ.
ಚಿತ್ರದಲ್ಲಿ ನಾಯಕಿಯ ಹೆಸರು ಅನರ್ಘ್ಯ'. ಅದೇ ಕಾರಣಕ್ಕೆ ಚಿತ್ರಕ್ಕೆ ಆನ ಎಂದು ಹೆಸರಿಡಲಾಗಿದೆ ಎಂದು ನಾಯಕಿಯಾಗಿ ನಟಿಸುತ್ತಿರುವ ಅದಿತಿ ಪ್ರಭುದೇವಾ ಹೇಳಿದ್ದಾರೆ. ಇದು ನಾನು ಇಷ್ಟಪಟ್ಟು ಮತ್ತು ಕಷ್ಟಪಟ್ಟು ಮಾಡುತ್ತಿರುವ ಸಿನಿಮಾ. ಇಂಥ ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ. ಕಥೆ ಕೇಳಿ ಒಂದೇ ಸಲಕ್ಕೆ ನಟಿಸಲು ಒಪ್ಪಿಕೊಂಡಿದ್ದೇನೆ. ಚಿತ್ರದ ಬಹುಪಾಲು ಶೂಟಿಂಗ್ ರಾತ್ರಿ ಹೊತ್ತಿನಲ್ಲಿಯೇ ನಡೆದಿದೆ. ಇನ್ನು ಕೆಲ ಭಾಗದ ಚಿತ್ರೀಕರಣ ಬಾಕಿ ಇದೆ. ನನ್ನ ಸಿನಿಮಾ ಕರಿಯರ್‌ನಲ್ಲಿ ಇಲ್ಲಿಯವರೆಗೂ ನಾನು ಮಾಡದ ವಿಶೇಷ ಪಾತ್ರ ಮಾಡುವ ಅವಕಾಶ ಸಿಕ್ಕಿರುವುದಕ್ಕೆ ಸಹಜವಾಗಿ ನಿರ್ಮಾಪಕರಿಗೆ ಕತಜ್ಞತೆ ಹೇಳಲೇಬೇಕು’ ಎಂದಿದ್ದಾರೆ. ಅದೇ ರೀತಿ ನಿರ್ದೇಶಕ ಮನೋಜ್‌ಗೆ ಇದು ಚೊಚ್ಚಲ ನಿರ್ದೇಶನದ ಸಿನಿಮಾ. ಈ ಹಿಂದೆ ಕಿರುಚಿತ್ರ ಮತ್ತು ಟೆಲಿ ಫಿಲಂಸ್‌ಗಳನ್ನು ನಿರ್ದೇಶನ ಮಾಡಿದ ಅನುಭವದ ಆಧಾರದ ಮೇಲೆಯೇ ಪೂರ್ಣ ಪ್ರಮಾಣದ ಆನ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ‘ಲಾಕ್‌ಡೌನ್ ಸಮಯದಲ್ಲಿ ಹೊಳೆದ ಕಥೆ ಇದು. ಸದ್ಯ ಇಡೀ ಭಾರತದಲ್ಲಿ ಲೇಡಿ ಸೂಪರ್ ಹೀರೋ ಪರಿಕಲ್ಪನೆಯಲ್ಲಿ ಯಾವುದೇ ಸಿನಿಮಾ ಬಂದಿಲ್ಲ. ಅದನ್ನೇ ಗಮನದಲ್ಲಿಟ್ಟುಕೊಂಡು ಕಥೆ ಸಿದ್ಧಪಡಿಸಿಕೊಂಡು, ಆರಂಭಿಸಿದ್ದೆ. ಇನ್ನೆರಡು ದಿನದ ಕ್ಲೈಮ್ಯಾಕ್ಸ್ ಶೂಟಿಂಗ್ ಬಾಕಿ ಇದೆ. ಚಿತ್ರದ ಕೊನೆಯ 20 ನಿಮಿಷಗಳು ನಿಮ್ಮನ್ನು ಫ್ಯಾಂಟಸಿ ಲೋಕಕ್ಕೆ ಕರೆದೊಯ್ಯಲಿದೆ. ಹಾರರ್ ಶೈಲಿಯ ಅಂಶಗಳೂ ಈ ಸಿನಿಮಾದಲ್ಲಿವೆ. ತಾಂತ್ರಿಕವಾಗಿ ಇಡೀ ಸಿನಿಮಾ ಶ್ರೀಮಂತವಾಗಿ ಮೂಡಿಬಂದಿದೆ. ಇನ್ನೊಂದು ವಿಶೇಷ ಏನೆಂದರೆ, ಈ ಸಿನಿಮಾ ಮುಂದಿನ ದಿನಗಳಲ್ಲಿ ಚಾಪ್ಟರ್‌ಗಳಾಗಿಯೂ ಸಿದ್ಧವಾಗಲಿದೆ’ ಎಂದು ಮಾಹಿತಿ ನೀಡಿದರು ಮನೋಜ್. ಸಿನಿಮಾದಲ್ಲಿ ಅದಿತಿ ಜತೆಗೆ ನಾಲ್ಕು ಪ್ರಮುಖ ಪಾತ್ರಗಳು ಚಿತ್ರದಲ್ಲಿವೆ. ಸಮರ್ಥ, ವಿಕಾಸ್ ಉತ್ತಯ್ಯ, ವರುಣ್ ಅಮರಾವತಿ ಮತ್ತು ಕಾರ್ತಿಕ್ ನಾಗರಾಜ್ ಆ ಪಾತ್ರಗಳನ್ನು ನಿರ್ವಹಿಸಲಿದ್ದಾರೆ.ಚೂರಿಕಟ್ಟೆ’ ಸಿನಿಮಾದಲ್ಲಿ ನಟಿಸಿದ್ದ ಪ್ರೇರಣಾ, ಆನ ಚಿತ್ರದಲ್ಲಿಯೂ ನಟಿಸಿದ್ದಾರೆ.
ಇನ್ನು ತಾಂತ್ರಿಕ ವರ್ಗ ಮತ್ತು ನಿರ್ದೇಶನದ ತಂಡವೇ ಚಿತ್ರದ ಪ್ರಮುಖ ಆಸ್ತಿ ಎಂದೇ ತಾಂತ್ರಿಕ ವರ್ಗವನ್ನು ಪರಿಚಯ ಮಾಡಿಕೊಟ್ಟರು ನಿರ್ದೇಶಕ ಮನೋಜ್. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಸಂಗೀತ ಸಂಯೋಜನೆ, ಸಂಕಲನಕಾರ ವಿಜೇತ ಚಂದ್ರ ತಾಂತ್ರಿಕ ವರ್ಗದ ಹೊಣೆ ಹೊತ್ತಿದ್ದಾರೆ. ಶಿವಮಂಜು ಚಿತ್ರತಂಡದ ಬೆನ್ನುಲುಬಾಗಿದ್ದಾರೆ. ಚಿತ್ರಮಂದಿರಗಳು ಹಿಂದಿನ ಸ್ಥಿತಿಗೆ ಮರಳಿದ ಬಳಿಕ ಬಿಡುಗಡೆಗೊಳಿಸುವ ಯೋಚನೆ ಚಿತ್ರತಂಡದ್ದಾಗಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article