I.N.D.I.A ಮೈತ್ರಿಕೂಟದಲ್ಲಿ ಬಿರುಕು ; ಏಕಾಂಗಿಯಾಗಿ ಸ್ಪರ್ಧೆಗೆ ಎಎಪಿ ಸಿದ್ದತೆ..!

New Delhi: ಇಂಡಿಯಾ ಮೈತ್ರಿಕೂಟದಲ್ಲಿ ದೊಡ್ಡ ಬಿರುಕು ಉಂಟಾಗಿರುವ (AAP – compete alone) ಲಕ್ಷಣಗಳು ಗೋಚರಿಸುತ್ತಿದ್ದು, ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾಗಿರುವ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) (Aam Aadmi Party led by Arvind Kejriwal) ಇದೀಗ ಮೈತ್ರಿಕೂಟ ತೊರೆದು ಏಕಾಂಗಿಯಾಗಿ ಸ್ಪರ್ಧೆ ಮಾಡುವುದಕ್ಕೆ ಸಿದ್ದತೆ

ನಡೆಸಿದೆ ಎಂಬ ಅನುಮಾನ (AAP – compete alone) ಮೂಡಿದೆ.

ಈ ಅನುಮಾನಕ್ಕೆ ಕಾರಣವಾಗಿರುವ ಪ್ರಮುಖ ಸಂಗತಿ ಎಂದರೆ, ಪಂಜಾಬ್ನ (Punjab) ಎಲ್ಲಾ 13 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ನೇತೃತ್ವದಲ್ಲೇ ಗೆಲ್ಲುತ್ತೇವೆ ಎಂದು ಪಂಜಾಬ್ ಮುಖ್ಯಮಂತ್ರಿ

ಭಗವಂತ್ ಮಾನ್ (Bhagwant Maan) ಹೇಳಿದ್ದಾರೆ. ಹೀಗಾಗಿಯೇ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lokhsabha Election)

ಪಂಜಾಬ್ನ ಎಲ್ಲಾ 13 ಲೋಕಸಭಾ ಸ್ಥಾನಗಳಲ್ಲಿ ಸ್ವಂತ ಬಲದ ಮೇಲೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ.

ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ್ ಮಾನ್ ಅವರು ತಮ್ಮ ಪಕ್ಷವು ರಾಜ್ಯದ ಎಲ್ಲಾ 13 ಲೋಕಸಭಾ ಸ್ಥಾನಗಳಲ್ಲಿ ವಿಜಯಶಾಲಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷವಾಗಿರುವ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಶ್ಚಿಮ ಬಂಗಾಳದ (West Bengal)

ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) (Congress (TMC)) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಘೋಷಿಸಿದ ಕೆಲವೇ ಗಂಟೆಗಳ ನಂತರ ಮಾನ್ ಅವರ

ಈ ಹೇಳಿಕೆ ಹೊರ ಬಂದಿದೆ. ಪಂಜಾಬ್ನ ಎಲ್ಲಾ 13 ಲೋಕಸಭಾ ಸ್ಥಾನಗಳಲ್ಲಿ ಆಪ್ ತನ್ನ ಸ್ವಂತ ಬಲದ ಮೇಲೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ

ಎಂದು ಎಂದು ಮೂಲಗಳು ತಿಳಿಸಿವೆ. ಇನ್ನೊಂದೆಡೆ ಸಾರ್ವತ್ರಿಕ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡುವ ಆಪ್ನ ಪಂಜಾಬ್ ಘಟಕದ ಪ್ರಸ್ತಾವನೆಯನ್ನು ಕೇಜ್ರಿವಾಲ್ (Kejariwal)

ಅನುಮೋದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಂಜಾಬ್ನಲ್ಲಿ ಕಾಂಗ್ರೆಸ್ನೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಎಎಪಿ ನಿರಾಕರಿಸಬಹುದು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಹಠಮಾರಿ ಧೋರಣೆ ಹೊಂದಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಇದನ್ನು ಓದಿ: ಬಿಹಾರದ ಮಾಜಿ ಸಿಎಂ ಹಾಗೂ ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ

Exit mobile version