ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ: ಕೇಜ್ರಿವಾಲ್

New Delhi, Aug 23 (ANI): Delhi Chief Minister Arvind Kejriwal during an interaction with traders in New Delhi on Sunday. (ANI Photo)

ನವದೆಹಲಿ,ಜೂ.14: 2022 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಎಲ್ಲಾ ಸ್ಥಾನಗಳಲ್ಲೂ ಸ್ಪರ್ಧಿಸಲಿದೆ ಎಂದು ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ. “ನಮ್ಮ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ” ಎಂದು ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಹೇಳಿದ್ದಾರೆ.

“ದೆಹಲಿಯಲ್ಲಿ ವಿದ್ಯುತ್ ಉಚಿತವಾಗಿರುವಂತೆ ಇಲ್ಲಿ ಯಾಕೆ ಇಲ್ಲ ಎಂದು ಗುಜರಾತಿನ ಜನರು ಯೋಚಿಸುತ್ತಿದ್ದಾರೆ. ಕಳೆದ 70 ವರ್ಷಗಳಲ್ಲಿ ಇಲ್ಲಿನ ಆಸ್ಪತ್ರೆಯ ಪರಿಸ್ಥಿತಿ ಸುಧಾರಿಸಿಲ್ಲ. ಆದರೆ ಇನ್ನು ಮುಂದೆ ಪರಿಸ್ಥಿತಿ ಬದಲಾಗುತ್ತದೆ” ಎಂದು ಅವರು ಹೇಳಿದರು.

ಕೇಜ್ರಿವಾಲ್ ಸೋಮವಾರ ರಾಜ್ಯ ಪ್ರವಾಸಕ್ಕಾಗಿ ಗುಜರಾತ್ ತಲುಪಿದ್ದಾರೆ. 2021 ರಲ್ಲಿ ನಡೆದ ಸೂರತ್ ಮುನ್ಸಿಪಲ್ ಕಾರ್ಪೊರೇಷನ್ (ಎಸ್‌ಎಂಸಿ) ಚುನಾವಣೆಯಲ್ಲಿ 120 ಸ್ಥಾನಗಳ ಪೈಕಿ 27 ಸ್ಥಾನಗಳನ್ನು ಗೆದ್ದ ನಂತರ ಕೇಜ್ರಿವಾಲ್ ಗುಜರಾತ್ ಪ್ರವಾಸ ಕೈಗೊಂಡಿರುವುದು ಇದು ಎರಡನೇ ಬಾರಿ. ಕೇಜ್ರಿವಾಲ್ ನೇತೃತ್ವದ ಪಕ್ಷವು ಎಲ್ಲಾ ಸ್ಥಳೀಯ ಸಂಸ್ಥೆಗಳಾದ ಪುರಸಭೆ ನಿಗಮಗಳು, ಪುರಸಭೆಗಳು, ಜಿಲ್ಲೆ ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

ಆಶ್ರಮ ರಸ್ತೆಯಲ್ಲಿರುವ ಪಕ್ಷದ ಹೊಸ ರಾಜ್ಯ ಕಚೇರಿಯನ್ನು ಕೇಜ್ರಿವಾಲ್ ಉದ್ಘಾಟಿಸಲಿದ್ದಾರೆ. ನಂತರ ಸಂಜೆ ದೆಹಲಿಗೆ ತೆರಳಲಿದ್ದಾರೆ ಎಂದು ಪಕ್ಷದ ವಕ್ತಾರ ಟುಲಿ ಬ್ಯಾನರ್ಜಿ ತಿಳಿಸಿದ್ದಾರೆ.

Exit mobile version