ಉಚಿತ ಯೋಜನೆಗಳ ಬೆನ್ನು ಬಿದ್ದ ಆಮ್ ಆದ್ಮಿ ಪಾರ್ಟಿ!

punjab

ಜುಲೈ 1ರಿಂದ ಪಂಜಾಬ್‍ನಲ್ಲಿ ಪ್ರತಿ ಮನೆಗೆ 300 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಪಂಜಾಬ್ ಆಮ್ ಆದ್ಮಿ ಪಕ್ಷ ಘೋಷಣೆ ಮಾಡಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಈ ಘೋಷಣೆಯನ್ನು ಹೊರಡಿಸಿದ್ದು, ಬಡವರ ಮೇಲಿನ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.

ಇನ್ನು ಇದಕ್ಕೂ ಮುನ್ನ ಮಂಗಳವಾರ ಟ್ವೀಟ್ ಮಾಡಿದ್ದ ಭಗವಂತ್ ಮಾನ್, ನಮ್ಮ ನಾಯಕರು ಮತ್ತು ದೆಹಲಿ ಮುಖ್ಯಮಂತ್ರಿಯಾದ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಅದ್ಭುತವಾದ ಸಭೆ ನಡೆಸಿದ್ದೇವೆ. ಪಂಜಾಬ್ ಜನತೆಗೆ ಶೀಘ್ರದಲ್ಲೇ ಶುಭ ಸುದ್ದಿಯನ್ನು ನೀಡಲಿದ್ದೇವೆ ಎಂದು ತಿಳಿಸಿದ್ದರು. ಇನ್ನು ವಿಧಾನಸಭಾ ಚುನಾವಣೆ ವೇಳೆ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಆಮ್ ಆದ್ಮಿ ಪಕ್ಷ ಭರವಸೆ ನೀಡಿತ್ತು. ಹಾಗಾಗಿ ಇದೀಗ ಉಚಿತ ವಿದ್ಯುತ್ ಅನ್ನು ಒದಗಿಸಲು ಮುಂದಾಗಿದೆ. ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ದೀರ್ಘ ವಿದ್ಯುತ್ ಸರಜರಾಜನ್ನು ಕಡಿತಗೊಳಿಸಲಾಗುತ್ತದೆ.

ಇನ್ನು ವಿದ್ಯುತ್ ಬಿಲ್ ಪಾವತಿಸದೇ ಇರುವವರ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಅನ್ನು ಕದಿಯುವವರ ವಿರುದ್ದವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇನ್ನು ದೆಹಲಿಯಲ್ಲಿ ಈಗಾಗಲೇ ಆಮ್ ಆದ್ಮಿ ಪಕ್ಷ 200 ಯೂನಿಟ್ ಉಚಿತ ವಿದ್ಯುತ್ ಅನ್ನು ಪೂರೈಸುತ್ತಿದೆ. ಪಂಜಾಬ್‍ನಲ್ಲಿ ಆಮ್ ಆದ್ಮಿ ಪಕ್ಷ ಈಗಾಗಲೇ ಮನೆ ಬಾಗಿಲಿಗೆ ಪಡಿತರವನ್ನು ತಲುಪಿಸುವ ಯೋಜನೆಯನ್ನು ಘೋಷಿಸಿದ್ದಾರೆ.

ಆಮ್ ಆದ್ಮಿ ಪಕ್ಷವೂ ಉಚಿತ ಯೋಜನೆಗಳನ್ನು ನೀಡುವುದರ ಮೂಲಕ ಆರ್ಥಿಕ ಶಿಸ್ತನ್ನು ಕೆಡಿಸುತ್ತದೆ. ದೀರ್ಘಾವಧಿಯಲ್ಲಿ ಆಪ್ ಸರ್ಕಾರದ ಈ ಕ್ರಮಗಳು ರಾಜ್ಯ ಸರ್ಕಾರಗಳು ದಿವಾಳಿಯಾಗುವಂತೆ ಮಾಡುತ್ತವೆ ಎಂದು ವಿಪಕ್ಷಗಳು ಟೀಕಿಸಿವೆ.

Exit mobile version