• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಆರಗ ಜ್ಞಾನೇಂದ್ರ ಒಬ್ಬ ಹುಚ್ಚ – ಡಿ.ಕೆ. ಶಿವಕುಮಾರ್

Preetham Kumar P by Preetham Kumar P
in ರಾಜಕೀಯ
ಆರಗ ಜ್ಞಾನೇಂದ್ರ ಒಬ್ಬ ಹುಚ್ಚ – ಡಿ.ಕೆ. ಶಿವಕುಮಾರ್
0
SHARES
0
VIEWS
Share on FacebookShare on Twitter

ಬೆಂಗಳೂರು ನ 19 : ಗೃಹ ಸಚಿವ ಆರಗ ಜ್ಞಾನೇಂದ್ರ ಒಬ್ಬ ಹುಚ್ಚ. ಹೀಗಾಗಿ ಏನೇನೋ ಮಾತಾಡುತ್ತಿದ್ದಾರೆ. ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ. ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಬಿಟ್ ಕಾಯಿನ್ ಹ್ಯಾಕಿಂಗ್ ಆರೋಪಿ ಶ್ರೀಕಿಯನ್ನು ಬಳಸಿಕೊಂಡು ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಕಾಂಗ್ರೆಸ್ ನಾಯಕರು ತಮಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ದೂರು ಬಂದರೆ ತನಿಖೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿರುವ ಬಗ್ಗೆ ಮಾಧ್ಯಮದವರ ಪ್ರಸ್ತಾಪಕ್ಕೆ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಅವರಿಗೆ ಲಿಖಿತ ದೂರು ಹೋಗಿದೆ. ಇದು ಅಧಿಕೃತ ಪತ್ರ. ಅದರಲ್ಲಿ ಸಿಎಂ ಕುಟುಂಬದ ಸದಸ್ಯರು, ಹಲವು ಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರು, ಸಂಸತ್ ಸದಸ್ಯರು ಸೇರಿದಂತೆ ಹಲವರ ಹೆಸರುಗಳು ಇವೆ. ಅವರು ಹಗರಣದಲ್ಲಿ ಷಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಗೃಹ ಸಚಿವರು ಮೊದಲು ಈ ದೂರಿನ ಬಗ್ಗೆ ಸುಮೊಟೋ ಕೇಸು ದಾಖಲಿಸಿ, ತನಿಖೆ ಮಾಡಿಸಲಿ, ಆಮೇಲೆ ಮೂತ್ ಕಾಂಗ್ರೆಸ್ ಬಗ್ಗೆ ಮಾತಾಡಲಿ ಎಂದು ಖಾರವಾಗಿ ಹೇಳಿದರು.

ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆದಾಗ ಶ್ರೀಕಿ ಜೈಲಿನಲ್ಲಿದ್ದನಲ್ಲಾ, ಅವನು ಹೇಗೆ ನಲಪಾಡ್ ಪರ ರಿಗ್ಲಿಂಗ್ ಗೆ (ನಕಲಿ ಮತದಾನ) ಸಹಾಯ ಮಾಡಲು ಸಾಧ್ಯ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ಅದಕ್ಕೆ ನಾನು ಹೇಳಿದ್ದು ಹೋಮ್ ಮಿನಿಸ್ಟರ್ ಒಬ್ಬ ಹುಚ್ಚ ಎಂದು. ಅವರಿಗೆ ಸಾಮಾನ್ಯ ಜ್ಞಾನವೇ ಇಲ್ಲ. ನಾನು ಏನು ಮಾತನಾಡುತ್ತಿದ್ದೇನೆ ಎಂಬುದರ ಪರಿವೆಯೇ ಇಲ್ಲ. ಹೀಗಾಗಿ ಅವರನ್ನು ಮೊದಲು ನಿಮ್ಹಾನ್ಸ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕಿದೆ ಎಂದರು.

ಶ್ರೀಕಿ ಜೈಲಿನಲ್ಲಿದ್ದಾಗ ಅವರಿಗೆ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಒದಗಿಸಿ, ಹ್ಯಾಕಿಂಗ್ ಮಾಡಿರಬಹುದು ಎಂಬ ಮಾತುಗಳಿವೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಅವರು, ‘ಅದನ್ನೇ ನಾನು ಹೇಳುತ್ತಿರುವುದು. ನನ್ನ ಮಗನಿಗೆ ಕಸ್ಟಡಿಯಲ್ಲಿದ್ದಾಗ ಪೊಲೀಸರು ಡ್ರಗ್ಸ್ ಸರಬರಾಜು ಮಾಡಿದ್ದಾರೆ ಎಂದು ಶ್ರೀಕಿ ಅವರ ತಂದೆ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಶ್ರೀಕಿ ಕೂಡ ನ್ಯಾಯಾಲಯಕ್ಕೆ ನೀಡಿರುವ ಹೇಳಿಕೆಯಲ್ಲಿ ಇದನ್ನು ಒಪ್ಪಿಕೊಂಡಿದ್ದಾನೆ. ಕೋರ್ಟ್ ಕೂಡ ಈ ಬಗ್ಗೆ ತನಿಖೆಗೆ ಆದೇಶಿಸಿದೆ ಎಂದು ಹೇಳಿದರು.

ಶ್ರೀಕಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡರಸಿ ಎಂದು ಕೋರ್ಟ್ ಸ್ಪಷ್ಟ ಆದೇಶ ನೀಡಿದ್ದರೂ ಅದನ್ನು ಮಾಡಿಲ್ಲ. ಕೋವಿಡ್ ನೆಪವೊಡ್ಡಿ ಬೇರೆ ಕಡೆ ಪರೀಕ್ಷೆ ಮಾಡಲಾಗಿದೆ. ಕೋರ್ಟ್ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಯಾಕಾಗಿ ಬೇರೆ ಕಡೆ ಪರೀಕ್ಷೆ ಮಾಡಿಸಿದರು? ಯಾರು ಇದಕ್ಕೆ ಜವಾಬ್ದಾರರು? ಯಾವ ಮಂತ್ರಿಗಳು ಜವಾಬ್ದಾರರು? ಬೇರೆ ಯಾರೆಲ್ಲ ಇದಕ್ಕೆ ಹೊಣೆಗಾರರು ಎಂಬುದು ಹೊರಬರಬೇಕಲ್ಲವೇ? ಆದರೆ ಅಪ್ರಬುದ್ಧ, ಜ್ಞಾನವೇ ಇಲ್ಲದ ಗೃಹ ಸಚಿವರು ಶಾಲಾ ಬಾಲಕನಂತೆ ಮಾತನಾಡುತ್ತಿದ್ದಾರೆ

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.