ದಾಖಲೆ ಇದ್ದರೆ ಒದಗಿಸಲಿ – ಆರಗ ಜ್ಞಾನೇಂದ್ರ

ಬೆಂಗಳೂರು ನ 11 : ಬಿಟ್ ಕಾಯಿನ್ ವಿಷಯವನ್ನು ಇಟ್ಟುಕೊಂಡು, ವಿರೋಧ ಪಕ್ಷ ಕಾಂಗ್ರೆಸ್ ನಾಯಕರು ಅನಗತ್ಯ ಗೊಂದಲ ನಿರ್ಮಿಸುತ್ತಿದ್ದು, ಸೂಕ್ತ ದಾಖಲೆ ಇದ್ದರೆ ತನಿಖಾಧಿಕಾರಿಗಳಿಗೆ ಒದಗಿಸಲಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಈ ಬಿಟ್‌ ಕಾಯಿನ್ ಹಗರಣ ವಿಷಯದಲ್ಲಿ ಕಾಂಗ್ರೆಸ್ ನಾಯಕರು, ಹಿಟ್ ಅಂಡ್ ರನ್ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಮಯದಲ್ಲಿಯೇ, ಆರೋಪಿ ಶ್ರೀಕಿಯನ್ನು ಹೋಟೆಲೊಂದರಲ್ಲಿ ನಡೆದ ದಾಂಧಲೆ ಸಮಯದಲ್ಲಿ ಬಂಧಿಸಲಾಗಿತ್ತು, ಶ್ರೀಕಿಯ ಸಹಚರರು ಯಾರು ಯಾರು ಇದ್ದರು ಎಂದು ಕಾಂಗ್ರೆಸ್ ನಾಯಕರಿಗೆ ತಿಳಿದಿತ್ತು” ಎಂದು ಸಚಿವರು ನೆನಪಿಸಿದರು.

ಕಾಂಗ್ರೆಸ್ ನಾಯಕರು ಬಿಟ್ ಕಾಯಿನ್ ವಿಷಯದಲ್ಲಿ ರಾಜಕೀಯ ಬೆರೆಸದೆ, ತಮ್ಮಲ್ಲಿರುವ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಒದಗಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ನಾಯಕರು, ನಮ್ಮ ಚೀಲದಲ್ಲಿ ಹಾವಿದೆ, ಹೊರ ತೆಗೆಯುತ್ತೇವೆ ಎಂದು ಖೊಟ್ಟಿ ಮಾತನಾಡದೆ, ಧೈರ್ಯದಿಂದ ಹೊರಗೆ ಬಿಡಲಿ,ಬಿಟ್ ಕಾಯಿನ್ ಹಗರಣದಲ್ಲಿ ಆಗ ಅದು ಯಾರನ್ನು ಕಚ್ಚುತ್ತದೆ ನೋಡೋಣ ಎಂದು ಗೃಹ ಸಚಿವರು ಸವಾಲೆಸೆದರು.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.