ನಂದಿನಿ ಹಾಲಿನ ದರ ಲೀಟರಿಗೆ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ : KMF ನೂತನ ಅಧ್ಯಕ್ಷ ಭೀಮಾ ನಾಯ್ಕ್

Bengaluru : ಕರ್ನಾಟಕ ಹಾಲು ಮಾರಾಟ ಮಹಾಮಂಡಳದ (KMF) ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಭೀಮಾ ನಾಯ್ಕ್ ಅವರು ನಂದಿನಿ (about Nandini milk price) ಹಾಲಿನ ಬೆಲೆ ಏರಿಕೆ

ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕ್, ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ, ಅಂತಿಮ ನಿರ್ಧಾರ

ತೆಗೆದುಕೊಳ್ಳುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ, ಜೊತೆಗೆ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲು, ಮೊಸರು ಮತ್ತು ತುಪ್ಪವನ್ನು ಒದಗಿಸಲು ಒತ್ತು ನೀಡುವುದರೊಂದಿಗೆ ದರ ಹೆಚ್ಚಳಕ್ಕೆ ವಿನಂತಿಸಿವೆ.

ಇದೇ ವೇಳೆ, ಹಾಲು ಉತ್ಪಾದಕರಿಗೆ ನೀಡುತ್ತಿರುವ ಮೊತ್ತ ಏರಿಕೆಗೆ ಈಗಾಗಲೇ ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ (K N Rajanna) ಬೆಂಗಳೂರಿನಲ್ಲಿ ಘೋಷಿಸಿದರು.

ರಾಜ್ಯವು ತನ್ನ ಡೈರಿ ಉದ್ಯಮವನ್ನು ಬೆಂಬಲಿಸಲು ಮತ್ತು ರೈತರಿಗೆ ಹೆಚ್ಚಿನ ಪ್ರಯೋಜನಗಳನ್ನು ಒದಗಿಸಲು ಆದ್ಯತೆ ನೀಡುವುದರಿಂದ ರೈತರಿಂದ ಖರೀದಿಸುವ ಹಾಲಿನ ಬೆಲೆಯನ್ನು ಹೆಚ್ಚಿಸುವ ಪ್ರಸ್ತಾಪವೂ ಇದೆ.

ಈ ಬಗ್ಗೆಯೂ ಮುಖ್ಯಮಂತ್ರಿಯವರೊಂದಿಗೆ ಸಮಾಲೋಚನೆ ನಡೆಸಲಾಗುವುದು (about Nandini milk price) ಎಂದಿದ್ದಾರೆ.

ಇದನ್ನೂ ಓದಿ : ಇಂದಿರಾ ಕ್ಯಾಂಟೀನ್‌ ಊಟದ ಮೆನು ಬದಲಾವಣೆ : ಹೊಸ ಸೇರ್ಪಡೆ ಪಟ್ಟಿ ಇಲ್ಲಿದೆ ನೋಡಿ

ಅಷ್ಟೇ ಅಲ್ಲದೆ ನಂದಿನಿ ಹಾಲಿನ ದರ ಏರಿಕೆಯ ಬಗ್ಗೆಯೂ ಚರ್ಚೆ ಆಗುತ್ತಿದೆ ಎಂದು ಅವರು ತಿಳಿಸಿದ್ದಾರೆ.ಈ ಮೊದಲು ಇದ್ದ ಬಾಲಚಂದ್ರ ಜಾರಕಿಹೊಳಿ (Balachandra Jarakiholi) ಅವರ

ಕೆಎಂಎಫ್ ಅಧ್ಯಕ್ಷ ಸ್ಥಾನ ಕೊನೆಗೊಂಡಿತು ಈ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿತ್ತು

ಆದರೆ ಈ ಸ್ಥಾನಕ್ಕೆ ಮೊದಲು ಕಾಂಗ್ರೆಸ್ (Congress) ಶಾಸಕ ಭೀಮಾ ನಾಯ್ಕ್ (Bheema Naik) ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು.ಅದರಂತೆ ಯಾರೂ ಕೂಡ ಅಧ್ಯಕ್ಷ ಸ್ಥಾನಕ್ಕಾಗಿ

ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಒಕ್ಕೂಟವು ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಲು ಮುಂದಾಗಿತ್ತು. ಆದರೆ, ಹಾಲಿನ ಪ್ರೋತ್ಸಾಹ ಧನ ಮುಂದುವರೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ

ಮೇರೆಗೆ ನಿರ್ಧರಿಸಿತ್ತು. ಆದರೆ ದರ ಹೆಚ್ಚಳದ ಶಾಕ್ ನೀಡುವ ಸುಳಿವು ಗ್ರಾಹಕರಿಗೆ ನೀಡಿತ್ತು. ಹಾಲು ಒಕ್ಕೂಟಗಳು ನಂದಿನಿ ಹಾಲಿನ ದರ ಪರಿಷ್ಕರಿಸುವಂತೆ ಪಟ್ಟು ಹಿಡಿದಿವೆ. ಒಂದು ಲೀಟರ್ ಹಾಲಿನ

ದರ 5 ರೂಪಾಯಿ ಏರಿಕೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಾರದಿಗಳಾಗಿವೆ.

ರಶ್ಮಿತಾ ಅನೀಶ್

Exit mobile version