ಬೆಂಗಳೂರು : ಯುವ ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು(Praveen Nettaru) ಹತ್ಯೆಯ ನಂತರ ಬಿಜೆಪಿ ಕಾರ್ಯಕರ್ತರ ಆಕ್ರೋಶ ಸ್ಟೋಟಗೊಂಡಿದೆ.
ಬಿಜೆಪಿ ಕಾರ್ಯಕರ್ತರ ಸರಣಿ ಹತ್ಯೆಗಳಾಗುತ್ತಿದ್ದರೂ, ಬಿಜೆಪಿ ಸರ್ಕಾರ(ABVP protest infront of homeminister office) ಯಾವುದೇ ಕ್ರಮ ತೆಗೆದುಕೊಂಡಿಲ್ಲ.
ಬರೀ ಹೇಳಿಕೆಗಳನ್ನು ನೀಡುವುದರಲ್ಲೇ ನಾಯಕರು ಕಾಲ ಕಳೆಯುತ್ತಿದ್ದಾರೆ ಎಂದು ಆರೋಪಿಸಿ ಇಂದು ಎಬಿವಿಪಿ ಮತ್ತು ಬಿಜೆಪಿ ಕಾರ್ಯಕರ್ತರು ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ಗೃಹ ಸಚಿವ(Home Minister) ನಿವಾಸಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಅವರು ಕೂಡಲೇ ರಾಜೀನಾಮೆ(Resign) ನೀಡಬೇಕು ಎಂದು ಆಗ್ರಹಿಸಿರುವ ಎಬಿವಿಪಿ ಕಾರ್ಯಕರ್ತರು ಗೃಹ ಸಚಿವರ ನಿವಾಸಕ್ಕೆ ನುಗ್ಗಿ ಕೆಲ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ.
https://vijayatimes.com/cinema-fans-cheer-for-internet-star/
ಇದೇ ವೇಳೆ “ಅಸಮರ್ಥ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai)” ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿ, ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮಾಡಿರುವ ದುಷ್ಕರ್ಮಿಗಳಿಗೆ ಜೈಲಿನಲ್ಲಿ ಟಿಕ್‌ಟಾಕ್ ಮಾಡಲು ಅವಕಾಶ ನೀಡಿ, ಭರ್ಜರಿ ಆತೀಥ್ಯ ನೀಡಲಾಗುತ್ತಿದೆ.
ನಮ್ಮದೇ ಸರ್ಕಾರದ ಆಡಳಿತವಿದ್ದರೂ, ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಪಿಎಫ್‌ಐ(PFI) ಮತ್ತು ಎಸ್‌ಡಿಪಿಐ(SDPI) ಸಂಘಟನೆಗಳನ್ನು ನಿಷೇಧಿಸಲು(Ban) ಸರ್ಕಾರ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು, ಮೂರು ವರ್ಷಗಳೇ ಕಳೆದರು, ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಗಳನ್ನು ಮಾಡುತ್ತಿರುವ, ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
