ಬೆಂಗಳೂರು, ಫೆ. 02: ರಾಜ್ಯದ ಬೆಂಗಳೂರು, ಬಳ್ಳಾರಿ, ಕೋಲಾರ, ಧಾರವಾಡ, ಕೊಪ್ಪಳ, ದಕ್ಷಿಣ ಕನ್ನಡ, ಚಿತ್ರದುರ್ಗ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ʻಈ ಅಧಿಕಾರಗಳು ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಮಾಹಿತಿ ಆಧರಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆʼ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯುಟಿವ್ ಎಂಜಿನಿಯರ್ ದೇವರಾಜ್ ಕಲ್ಲೇಶ್, ಬೆಂಗಳೂರಿನ ಸಹಕಾರ ಇಲಾಖೆ ಜಂಟಿ ರಿಜಿಸ್ಟ್ರಾರ್ ಪಾಂಡರಂಗ ಗರಗ, ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನೆಗಳ ವಿಭಾಗದ ಜಂಟಿ ನಿರ್ದೇಶಕ ಕೆ.ವಿ. ಜಯರಾಜ್, ಕೋಲಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಎಸ್.ಎನ್. ವಿಜಯಕುಮಾರ್, ಕೊಪ್ಪಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್, ಲೋಕೋಪಯೋಗಿ ಇಲಾಖೆಯ ಮಾಗಡಿ ಉಪವಿಭಾಗದ ಕಿರಿಯ ಎಂಜಿನಿಯರ್ ಚನ್ನಬಸಪ್ಪ, ಧಾರವಾಡದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಶ್ರೀನಿವಾಸ್ ಅವರ ಮನೆ ಮಲೆ ದಾಳಿ ನಡೆಸಲಾಗಿದೆ.