ರಾಜ್ಯಪಾಲರಿಂದ ಯಡಿಯೂರಪ್ಪ ರಾಜೀನಾಮೆ ಅಂಗೀಕಾರ: ಹಂಗಾಮಿ ಸಿಎಂ ಆಗಿರಲು ಸೂಚನೆ

ಬೆಂಗಳೂರು, ಜು. 26: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಬಿ. ಎಸ್‌. ಯಡಿಯೂರಪ್ಪ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌‌‌ಚಂದ್‌‌ ಗೆಹ್ಲೋಟ್‌‌ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಘೋಷಣೆ ಮಾಡಿದ್ದ ಬಿಎಸ್ವೈ ನಂತರ ರಾಜಭವನಕ್ಕೆ ಬಂದು ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ಯಡಿಯೂರಪ್ಪ ಅವರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು, ಹಂಗಾಮಿ ಸಿಎಂ ಆಗಿರುವಂತೆ ಸೂಚನೆ ನೀಡಿದ್ದಾರೆ. ಸರ್ಕಾರದ ಸಾಧನ ಸಮಾವೇಶದಲ್ಲಿ ಗದ್ಗಿತರಾಗಿ ಮಾತನಾಡಿದ ಯಡಿಯೂರಪ್ಪ, ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದರು.

Exit mobile version