ಮೈಸೂರು, ಮಾ. 17: ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಬೈಕ್‌ನಲ್ಲಿ ಯುವಕ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಘಟನೆ ಕುವೆಂಪುನಗರದಲ್ಲಿ ನಡೆದಿದೆ.
ಶ್ರೀರಾಂಪುರ ನಿವಾಸಿ ಗೌತಮ್ ಅಪಘಾತದಲ್ಲಿ ಮೃತಪಟ್ಟ ಯುವಕ. ಈತ ಮಂಗಳವಾರ ರಾತ್ರಿ ಕುವೆಂಪುನಗರದ ಎಂ ಬ್ಲಾಕ್‌ನಲ್ಲಿರುವ ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಹೊರಡಲು ಬೈಕ್ ತೆಗೆದಾಗ ಎದುರಿನಿಂದ ಬಂದ ಬೈಕ್ ವೇಗವಾಗಿ ಬಂದು ಗುದ್ದಿದೆ. ತಕ್ಷಣ ಕೆಳಕ್ಕೆ ಬಿದ್ದ ಗೌತಮ್ ತೀವ್ರವಾಗಿ ಗಾಯಗೊಂಡು ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮತ್ತೊಬ್ಬ ಬೈಕ್ ಸವಾರ ಮನೋಜ್ ಗಾಯಗಳೊಂದಿಗೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಅತಿ ವೇಗದಲ್ಲಿ ಬೈಕ್ ಚಲಾಯಿಸಿಕೊಂಡು ಬಂದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕೆ.ಆರ್.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.