ಭೀಕರ ರಸ್ತೆ ಅಪಘಾತ: ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ, 5 ಸಾವು, 60 ಜನರಿಗೆ ಗಾಯ

Tamilnadu: ಚೆನ್ನೈ-ಬೆಂಗಳೂರು (accident in Chennai-Bangalore highway) ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿ ಬಸ್ ನಡುವೆ ಇಂದು (ನ.11) ಮುಂಜಾನೆ

ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ

ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ (accident in Chennai-Bangalore highway) ಬಸ್ ಡಿಕ್ಕಿ ಹೊಡೆದಿದೆ.

ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಹತ್ತು ಆಂಬ್ಯುಲೆನ್ಸ್‌ (Ambulance) ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ

ಧಾವಿಸಿದ ಪೊಲೀಸರು ಹತ್ತು ಆಂಬ್ಯುಲೆನ್ಸ್‌ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಚೆನ್ನೈಗೆ ಬೆಂಗಳೂರಿನಿಂದ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ (Express) ಸಾರಿಗೆ ಸಂಸ್ಥೆಯ ಬಸ್

ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ ಬಸ್ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮವಾಗಿ ಓರ್ವ ಮಹಿಳೆ ಸೇರಿ ನಾಲ್ಕು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ನಾಲ್ವರು

ಮೃತಪಟ್ಟಿದ್ದು, ಸಾವನ್ನಪ್ಪಿರುವವರನ್ನು ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್‌ಇಟಿಸಿ (SETC) ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ

ಬಿ ಅಜಿತ್ (25) ಹಾಗೂ ಓಮ್ನಿಬಸ್ ಚಾಲಕ ಎನ್ ಸೈಯದ್ ಎಂದು ಗುರುತಿಸಲಾಗಿದೆ.

ಸುಮಾರು ಮುಂಜಾನೆ 4.00 ವೇಳೆ ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು

ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಸಾವನ್ನಪ್ಪಿರುವವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ

ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡುವುದೇ ನನ್ನ ಗುರಿ: ಬಿವೈ ವಿಜಯೇಂದ್ರ

Exit mobile version