ಭದ್ರಾವತಿ ಜ 4: ACF ಅಧಿಕಾರಿಯೊಬ್ಬರು ಜಾತಿ ನಿಂದನೆ ಮಾಡಿದ್ದಾರೆ ಎಂದು ACF ವಿರುದ್ದ ದೂರು ದಾಖಲಾಗಿರುವ ಪ್ರಕರಣ ಲಕ್ಕವಳ್ಳಿ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ನಡೆದಿದೆ. ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಲಕ್ಕವಳ್ಳಿ, ಭದ್ರಾ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ’ ಎಂದು ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಲಾರದ ನಿವಾಸಿ ಚಿತ್ರಪ್ಪಯರಬಾಳ ತಿಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, `ಅಲ್ವಾರ ಗ್ರಾಮದ ವ್ಯಾಪ್ತಿಯಲ್ಲಿ ಭದ್ರಾ ವನ್ಯಜೀವಿ ವಿಭಾಗದ ವ್ಯಾಪ್ತಿಯ ಅರಣ್ಯದಿಂದ ವನ್ಯಜೀವಿಗಳು ದಾಳಿ ಮಾಡಿ ಬೆಳೆಗಳನ್ನು ನಾಶ ಮಾಡುತ್ತಿವೆ. ಅದನ್ನು ತಡೆಗಟ್ಟುವಂತೆ ಮನವಿ ಸಲ್ಲಿಸಲು ಗ್ರಾಮಸ್ಥರಾದ ಕುಮಾರ. ಎನ್.ರಾಘು, ರಮೇಶ, ಮಹೇಶ್ ಅವರೊಂದಿಗೆ ಹೋದಾಗ ಅರಣ್ಯಾಧಿಕಾರಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ’ ಎಂದು ಹೇಳಿದ್ದಾರೆ.
ಈ ಬಗ್ಗೆ ನ.8ರಂದು ಲಕ್ಕವಳ್ಳಿಯ ಪಲಯ ಅರಣ್ಯಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ನ್ಯಾಯ, ರಕ್ಷಣೆ ಮತ್ತು ಪರಿಹಾರ ಒದಗಿಸುವಂತೆ ಹಾಗೂ ಅರಣ್ಯಾಧಿಕಾರಿ ವಿರುದ್ಧ ಕ್ರಮ ಲಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈವರೆಗೂ ಕ್ರಮ ಕೈಗೊಂಡಿಲ್ಲ. ಹಾಗಾಗಿ, ಜಾತಿನಿಂದನೆ ಮಾಡಿರುವ ಅರಣ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳು ವಂತೆ ಲಕ್ಕವಳ್ಳಿ ಠಾಣೆಗೆ ದೂರು ನೀಡಲಾಗಿದೆ’ ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.