• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜನರ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳಿ, ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ: ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್ಡಿಕೆ ಕಿಡಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕ್ಯಾಬ್‌ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಲಿ: ಎಚ್ಡಿಕೆ ಆಗ್ರಹ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 14: ಕೋವಿಡ್ ಲಸಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಬಗ್ಗೆ ಬಿಜೆಪಿ ನಾಯಕರು ನೀಡಿರುವ ಹೇಳಿಕೆಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜನರ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳಿ, ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ನಾಯಕರ ಹೇಳಿಕೆಗಳನ್ನ ಉಲ್ಲೀಖಿಸಿದ ಹೆಚ್.ಡಿ ಕುಮಾರಸ್ವಾಮಿ, ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ?, ಜಡ್ಜ್‌ಗಳು ಸರ್ವಜ್ಞರಲ್ಲ. ಕೊರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು. ನೇಣು ಹಾಕಿಕೊಳ್ಳಲು ಆಗುತ್ತಾ? ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ. ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ. ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು.
‘ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ.

ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ? ‘ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ,’ ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು ಎಂದು ಟೀಕಿಸಿದರು.

ಕೋವಿಡ್‌ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಿಫಲವಾಗಿವೆ. ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್‌ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರ್ಕಾರದ ಅಸಮರ್ಥತೆ ಎಂದು ಕಿಡಿಕಾರಿದರು.

ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಮಾಜಿ ಸಿಎಂ ಗುಡುಗಿದರು.

ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್‌ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿರುವೆಡೆ ಅಂಥ ಬದ್ಧತೆ ಕಾಣುತ್ತಿಲ್ಲ.

ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಗೆ ಟಾಂಗ್ ನೀಡಿದರು.

ಬಿಜೆಪಿ ನಾಯಕರು ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. ‘ನಿಮ್ಮ ಕರ್ತ್ಯವ್ಯ ನೀವು ಮಾಡಿ.’ ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ ಎಂದು ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದರು.

ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು.
4/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 14, 2021

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.