ಅಪ್ರಾಪ್ತ ಮಕ್ಕಳು ವಾಹನ ಚಲಾಯಿಸಿದರೆ ಪೋಷಕರ ವಿರುದ್ಧ ಕಠಿಣ ಕ್ರಮ: ಪೊಲೀಸ್ ಇಲಾಖೆ ಎಚ್ಚರಿಕೆ

Bengaluru: ಅಪ್ರಾಪ್ತ ಮಕ್ಕಳು ವಾಹನ ಚಲಾಯಿಸಿದರೆ ಪೋಷಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೋಷಕರು ಎಚ್ಚರಿಕೆಯಿಂದ ಇರಬೇಕಾಗಿದ್ದು, ಮಕ್ಕಳ ಕೈಗೆ ವಾಹನಗಳನ್ನು ನೀಡದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಈ ಕುರಿತು ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ (B Dayananda) ಅವರು, ಅಪ್ರಾಪ್ತ ಮಕ್ಕಳು ಯಾವುದೇ ರೀತಿಯ ವಾಹನ ಚಲಾಯಿಸುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಈ ರೀತಿಯ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಲಿದ್ದು, ಮಕ್ಕಳಿಗೆ ವಾಹನ ನೀಡಿದ ಪೋಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಎಷ್ಟೇ ಬುದ್ದಿವಂತರಾಗಿದ್ದರೂ, ಯಾವುದೇ ತಂತ್ರಜ್ಞಾನ ಬಳಕೆ ಮಾಡಿದರೂ ಅವರು ಪ್ರಬುದ್ಧರಾಗಿರುವುದಿಲ್ಲ. ಹೀಗಾಗಿಯೇ 18 ವರ್ಷದ ನಂತರವೇ ಲೈಸೆನ್ಸ್ (License) ಕೊಡಲು ಅನೇಕ ವೈಜ್ಞಾನಿಕ ಕಾರಣಗಳಿವೆ. ನಮ ಮಕ್ಕಳು ಹೆಚ್ಚು ಬುದ್ಧಿವಂತರು ಎಂದು ಪೋಷಕರು ಮಕ್ಕಳಿಗೆ ವಾಹನದ ಕೀ ಕೊಟ್ಟರೆ ಅವರ ಕೈಗೆ ಆಯುಧ ಕೊಟ್ಟಂತೆ. ಹೀಗಾಗಿ ಪೋಷಕರು ಎಚ್ಚರಿಕೆ ವಹಿಸಬೇಕು.

ಈ ರೀತಿಯ ಪ್ರಕರಣಗಳು ಜ್ಯುವಿನೈಲ್ ಜಸ್ಟೀಸ್ ಆ್ಯಕ್ಟ್ (Juvenile Justice Act) ಪ್ರಕಾರ, ಜಾಮೀನುರಹಿತ ಪ್ರಕರಣ ದಾಖಲಿಸಲಾಗುವುದು. ಬಾಲನ್ಯಾಯ ಕಾಯಿದೆಯ ಜಾಮೀನು ರಹಿತ ಸೆಕ್ಷನ್ಗಳ ಅಡಿಯಲ್ಲಿ ಪೋಷಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಪೂಣೆಯಲ್ಲಿ (Pune) ಉದ್ಯಮಿಯೊಬ್ಬರ ಅಪ್ರಾಪ್ತ ಪುತ್ರ ಕಾರು ಚಲಾಯಿಸಿ ಇಬ್ಬರು ವ್ಯಕ್ತಿಗಳ ಸಾವಿಗೆ ಕಾರಣವಾದ ನಂತರ ರಾಜ್ಯದಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಈ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ. ಮಕ್ಕಳ ಕೈಗೆ ವಾಹನಗಳನ್ನು ನೀಡಬೇಡಿ, ಅದರಿಂದ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸುತ್ತಿದೆ. ಜಿಲ್ಲಾವಾರು ಅನೇಕ ಕಡೆಗಳಲ್ಲಿ ಈ ಬಗ್ಗೆ ಅಭಿಮಾನಗಳನ್ನು ನಡೆಸಲು ಪೊಲೀಸ್ ಇಲಾಖೆ ಮುಂದಾಗಿದೆ.

ಮದ್ಯ ಸೇವಿಸಿ ವಾಹನ ಚಲಾಯಿಸುವುದು, ವೀಲಿಂಗ್ನಂತಹ ಯಾವುದೇ ಪ್ರಕರಣದಲ್ಲಿ ಅಪ್ರಾಪ್ತರು ಭಾಗಿಯಾಗಿದ್ದಲ್ಲಿ ಅವರ ತಂದೆ-ತಾಯಿ ಜೈಲಿಗೆ (Jail) ಹೋಗಬೇಕಾಗುತ್ತದೆ. ಇಂತಹ ಪ್ರಕರಣದ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿ ಹೇಳಬೇಕು ಎಂದು ಮಾಹಿತಿ ನೀಡಲಾಗುತ್ತಿದೆ.

Exit mobile version