Visit Channel

ನಟ ಅನಂತ್ ನಾಗ್ ಅವರಿಗೆ ಡಾಕ್ಟರೇಟ್ ನೀಡಿ ಗೌರವಿಸಿದ ಬೆಂಗಳೂರಿನ ಉತ್ತರ ವಿಶ್ವವಿದ್ಯಾಲಯ

Anant nag

ಕನ್ನಡ ಚಿತ್ರರಂಗದ(Kannada Film Industry) ಹಿರಿಯ ನಟ, ಚಂದನವನದ ಚಿರಯುವಕ ಅನಂತ್ ನಾಗ್ ಸೇರಿದಂತೆ ಮೂವರು ಸಾಧಕರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್(Doctorate) ಘೋಷಣೆ ಮಾಡಲಾಗಿದೆ. ಹೌದು, ಅನಂತ್ ನಾಗ್ ಕನ್ನಡ ಚಿತ್ರರಂಗದ ಎವರ್ ಗ್ರೀನ್ ನಟ ಹಾಗೂ ಭಾರತೀಯ ಚಿತ್ರಲೋಕ ಕಂಡ ಅದ್ಭುತ ಪ್ರತಿಭೆ. ತಮ್ಮ ಸ್ವಾಭಾವಿಕ ನಟನಾ ಶೈಲಿಯಿಂದಲೇ ಗಮನ ಸೆಳೆಯುವ ಇವರು, 1973 ರಲ್ಲಿ ಬಿಡುಗಡೆಯಾದ ಸಂಕಲ್ಪ ಚಿತ್ರದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

Actor

ಇದೀಗ ಈ ಹಿರಿಯ ನಟ ಬರೀ ಅನಂತ್ ನಾಗ್ ಅಲ್ಲ, ಅವರೀಗ ಡಾ. ಅನಂತ್ ನಾಗ್. ಕೋಲಾರದ ನಂದಿನಿ ಪ್ಯಾಲೇಸ್‌ನಲ್ಲಿ ಇಂದು ನಡೆದ ವಿ.ವಿಯ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ ಸೇರಿದಂತೆ ಮತ್ತಿತರ ಗಣ್ಯರು ಸಾಧಕರಿಗೆ ಪದವಿ ನೀಡಿ ಗೌರವಿಸಿದ್ದಾರೆ ಎಂದು ಕುಲಪತಿ ಪ್ರೊ. ನಿರಂಜನ ವಾನಳ್ಳಿ ತಿಳಿಸಿದ್ದಾರೆ. ಅನಂತ್ನಾಗ್, ಕನ್ನಡ ಸಿನಿಮಾಗಳು ಮಾತ್ರವಲ್ಲದೆ ಹಿಂದಿ, ತೆಲುಗು, ಮಲಯಾಳಂ, ತಮಿಳು ಸೇರಿದಂತೆ ಸುಮಾರು 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಿನಿಮಾ ಮಾತ್ರವಲ್ಲದೇ ಮಾಲ್ಗುಡಿ ಡೇಸ್, ಗರ್ವ, ಪ್ರೀತಿ ಇಲ್ಲದ ಮೇಲೆ, ಚಿಟ್ಟೆ ಹೆಜ್ಜೆ ಸೇರಿದಂತೆ ಕೆಲವೊಂದು ಧಾರಾವಾಹಿಗಳಲ್ಲಿ ಕೂಡಾ ಅನಂತ್ನಾಗ್ ಅಭಿನಯಿಸಿದ್ದಾರೆ. ವಿಶೇಷವಾಗಿ ಕನ್ನಡ ಚಿತ್ರರಂಗಕ್ಕೆ ಇವರು ನೀಡಿದ ಅನುಪಮ ಸೇವೆಯನ್ನು ಪರಿಗಣಿಸಿ, ಹಿರಿಯ ನಟ ಅನಂತ್ ನಾಗ್ ಅವರಿಗೆ ವಿಶ್ವವಿದ್ಯಾಲಯವು ಡಿ.ಲಿಟರೇಚರ್ ಪದವಿ ನೀಡಿ ಗೌರವಿಸಿದೆ.

  • ಪವಿತ್ರ

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.