ನಟ ದರ್ಶನ್ ಹಾಗೂ ಸ್ನೇಹಿತರಿಂದ ಹೋಟೆಲ್ ಸಪ್ಲೇಯರ್ ಮೇಲೆ ಹಲ್ಲೆ ಆರೋಪ: ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಂದ ಗೃಹ ಸಚಿವರಿಗೆ ದೂರು

ಬೆಂಗಳೂರು, ಜು. 15: ನಟ ದರ್ಶನ್ ಹೆಸರಿನಲ್ಲಿ 25 ಕೋಟಿ ರೂ ವಂಚನೆ ಯತ್ನ ಪ್ರಕರಣಕ್ಕೆ ತಣ್ಣಗಾಗುತ್ತಿದ್ದಂತೆ, ನಟ ದರ್ಶನ್ ಹಾಗೂ ಅವರ ಸ್ನೇಹಿತರ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಿಡಿದೆದ್ದಿದ್ದಾರೆ.

ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ಸಪ್ಲೈಯರ್ ಗೆ ನಟ ದರ್ಶನ್ ಮತ್ತು ಸ್ನೇಹಿತರ ಗ್ಯಾಂಗ್ ನಿಂದ ಹಲ್ಲೆಯಾಗಿದೆ ಎಂದು ಆರೋಪಿಸಿ ಇಂದು ಬೆಳಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಇಂದ್ರಜಿತ್ ಲಂಕೇಶ್ ಭೇಟಿ ಮಾಡಿ  ದೂರು ನೀಡಿದ್ದಾರೆ. ನಟ ದರ್ಶನ್ ಮತ್ತು ಅವರ ಸ್ನೇಹಿತರ ವಿರುದ್ಧ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೈಸೂರು ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರು ನಿರ್ದೇಶಕ ಇಂದ್ರಜಿತ್ ಲಂಕೇಶ್, ನಟ ದರ್ಶನ್ ಮತ್ತು ಅವರ ಮೈಸೂರಿನ ಸ್ನೇಹಿತರಾದ ರಾಕೇಶ್ ಪಾಪಣ್ಣ ಮತ್ತು ಹರ್ಷ ಮೇಲೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಸಂದೇಶ್ ನಾಗರಾಜ್ ಅವರಿಗೆ ಸೇರಿದ ಹೊಟೇಲ್ ನಲ್ಲಿ ಇತ್ತೀಚೆಗೆ ಇದೇ ಸ್ಟಾರ್ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಹೋಗಿ ಊಟ ಪಾರ್ಟಿ ಮಾಡಿದ್ದಾರೆ. ಈ ವೇಳೆ ಸಪ್ಲೈಯರ್ ಗೆ ಹೊಡೆದಿದ್ದಾರೆ. ಇದರಿಂದ ಅವನ ಕಣ್ಣು ಮಂಜಾಗಿ ಹೋಗಿದೆ, ನಂತರ ಹೋಗಿ ಪೊಲೀಸ್ ಸ್ಟೇಷನ್ ನಲ್ಲಿ ಸೆಟ್ಲ್ ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ನನ್ನಲ್ಲಿ ಸಾಕ್ಷಿಗಳಿವೆ, ಸಾಕ್ಷಿಗಳನ್ನಿಟ್ಟುಕೊಂಡೇ ಇಂದು ಗೃಹ ಸಚಿವರಿಗೆ ದೂರು ನೀಡಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದೇನೆ ಎಂದಿದ್ದಾರೆ.

ಮಹಿಳೆಯಿಂದ 25 ಕೋಟಿ ರೂ. ವಂಚನೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಇಂದ್ರಜಿತ್ ಲಂಕೇಶ್, ತಲೆ ಸೀಳ್ತೀನಿ ತಲೆ ಹೊಡಿತೀನಿ ಅಂದವರು ಈಗ ಉಲ್ಟಾ ಆಗಿದ್ದಾರೆ. ಈಗ ನನಗೆ ನಿರ್ಮಾಪಕರು ಅಂತಿರಲ್ಲಾ ಯಾಕೆ. 25 ಕೋಟಿ ರೂ. ವಂಚನೆ ಯತ್ನ ಕೇಸ್ ಸೆಟಲ್ ಮೆಂಟ್ ಆಯ್ತಾ. ಆ ಹುಡುಗಿಯನ್ನ ನೀವು ಏಕೆ ಮನೆಗೆ ಕರೆಸಿಕೊಳ್ತೀರಾ. ನಿರ್ಮಾಪಕ ಮತ್ತು ನಟನ ಮಧ್ಯೆ ವ್ಯವಹಾರ ನಡೆಸಿದ್ದಾರೆ. ಫಿಕ್ಚರ್ ರೀತಿ ಕಥೆ ಕಟ್ಟಿ ಸುಮ್ಮನಾಗಿದ್ದು ಯಾಕೆ…? ಎಂದು ಪ್ರಶ್ನಿಸಿದ್ದಾರೆ.

Exit mobile version