Bengaluru: ಕನ್ನಡ ಚಿತ್ರರಂಗದಲ್ಲಿ ಮನೋಜ್ಞ ನಟನೆಯ ಮೂಲಕ ಮನೆಮಾತಾಗಿದ್ದ ನಟ, ನಿರ್ಮಾಪಕ, (Actor Dwarakish No More)ನಿರ್ದೇಶಕ ದ್ವಾರಕೀಶ್ (Actor Dwarakish)
ಅವರು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಎಲೆಕ್ಟ್ರಾನಿಕ್ ಸಿಟಿ (Electronic City) ಯಲ್ಲಿರುವ
ಅವರ ಮನೆಯಲ್ಲಿಯೇ ನಿಧನರಾಗಿದ್ದಾರೆ ಎಂದು ದ್ವಾರಕೀಶ್ ಪುತ್ರ (Actor Dwarakish No More) ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಆಗಸ್ಟ್ (August) 19ರಂದು ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಜನಸಿದ ಅವರು ನಟನೆಯ ಮೂಲಕವೇ ಮನೆಮಾತಾಗಿದ್ದರು. ಇವರ ತಂದೆ ಶಾಮರಾವ್ ಹಾಗೂ ತಾಯಿ ಜಯಮ್ಮ. ಶಾರದಾ
ವಿಲಾಸ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ ಇವರು ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ (CPC Polytechnic College) ಮೆಕ್ಯಾನಿಕಲ್ ಎಂಜಿನಿಯರಿಂಗ್ ಮಾಡಿದರು. ಆರಂಭದಲ್ಲಿ
ಸಹೋದರನ ಜತೆಗೂಡಿ ಭಾರತ್ ಆಟೋ ಸ್ಪೇರ್ ಸ್ಟೋರ್ ಪ್ರಾರಂಭಿಸಿದರು. ಆದರೆ, ಅವರ ಆಸಕ್ತಿ ಸಿನಿಮಾ ಕಡೆಗೆ ಹೊರಳಿತ್ತು.
1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ.
ದಿವಂಗತ ನಟ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಚಿತ್ರಗಳಲ್ಲಿ ತೆರೆ ಹಂಚಿಕೊಂಡಿದ್ದರು.
1966ರಲ್ಲಿ ಮಮತೆಯ ಬಂಧನ ಸಿನಿಮಾವನ್ನು ದ್ವಾರಕೀಶ್ ಅವರು ಮತ್ತಿಬ್ಬರು ನಿರ್ಮಾಪಕರ ಜೊತೆ ಸೇರಿ ತುಂಬಾ ಪಿಕ್ಚರ್ಸ್ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿದ್ದರು.
1969ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ (Mayor Muttanna) ಎಂಬ ಸಿನಿಮಾಗೆ ಬಂಡವಾಳ ಹಾಕುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಭಡ್ತಿ ಪಡೆದರು. ಕಿಟ್ಟು-ಪುಟ್ಟು,
ಸಿಂಗಾಪುರದಲ್ಲಿ ರಾಜಕುಳ್ಳ, ಭಾಗ್ಯವಂತರು, ಗುರು ಶಿಷ್ಯರು, ಪೆದ್ದ-ಗೆದ್ದ, ಆಪ್ತಮಿತ್ರ (Aptamitra) ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ಕೊಟ್ಟ ಹೆಗ್ಗಳಿಕೆ ದ್ವಾರಕೀಶ್ ಅವರದ್ದಾಗಿದೆ. ಚೌಕ ಇವರ ಕೊನೆಯ
ಸಿನಿಮಾ ಆಗಿದೆ. ʼದ್ವಾರಕೀಶ್ ಚಿತ್ರʼ ಇವರ ನಿರ್ಮಾಣ ಸಂಸ್ಥೆಯಾಗಿತ್ತು.
ಇವರು ಸುಮಾರು 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. ಹಾಗೂ ಕನ್ನಡದ ಜತೆಗೆ ಹಿಂದಿ, ತಮಿಳು, ತೆಲುಗು (Tamil, Telugu) ಸಿನಿಮಾಗಳನ್ನೂ ನಿರ್ಮಾಣ ಮಾಡಿದ ಕೀರ್ತಿ ಇವರದ್ದು. ಒಟ್ಟೂ
ಇವರು 52 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ದ್ವಾರಕೀಶ್ ಅವರ ಅಗಲಿಕೆಗೆ ಸ್ಯಾಂಡಲ್‌ವುಡ್ (Sandalwood) ನಟರು ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಇದನ್ನು ಓದಿ: ಭಾರತೀಯ ಮಿಲಿಟರಿಯಿಂದ ಇಂಜಿನಿಯರಿಂಗ್ ಪದವೀಧರರ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ