ಕರುನಾಡ ಕುಳ್ಳ, ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ ವಿಧಿವಶ!

ಕರುನಾಡ ಕುಳ್ಳನೆಂದೇ ಖ್ಯಾತಿ ಪಡೆದಿರುವ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ (Dwarakish) ಅವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು.ಇವರ ಪೂರ್ಣ ಹೆಸರು ಬಂಗ್ಲೆ ಶಾಮಾ ದ್ವಾರಕೀಶ್, ಇವರ ತಂದೆ ಶಾಮರಾವ್ (Shamarao) ಮತ್ತು ತಾಯಿ ಜಯಮ್ಮ (Jayamma).

ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದ್ದರು ತದ ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ (Bharath Auto Spare Store) ಆರಂಭಿಸಿದರು.

ನಟ ದ್ವಾರಕೀಶ್ ಅವರು ಮೊದಲ ಬಾರಿಗೆ 1995ರಲ್ಲಿ 2000 ರೂಪಾಯಿ ವೆಚ್ಚದಲ್ಲಿ ಮಮತೆಯ ಬಂಧನ ಸಿನಿಮಾ ನಿರ್ಮಾಣ ಮಾಡಿದ್ದರು. ಇದಾದ ಮೇಲೆ ಮೇಯರ್ ಮುತ್ತಣ್ಣ (Mayor Muttanna) ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ಮಾಪಕನಾಗಿ ಬಡ್ತಿ ಪಡೆದರು.

1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಒಂದು ಕಾಲದಲ್ಲಿ ವಿಷ್ಣುವರ್ಧನ್ (Vishnuvardhan) ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್- ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದರು.

1969ರಲ್ಲಿ ಡಾ.ರಾಜ್‌ಕುಮಾರ್ (Dr. Rajkumar) ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾದರು. ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದ ಬಳಿಕ ಹಲವು ಸಿನಿಮಾಗಳನ್ನು ನಿರ್ಮಿಸಿ, ಅದರಲ್ಲಿ ಯಶಸ್ಸುಗಳಿಸಿದ್ದಾರೆ.

ದ್ವಾರಕೀಶ್ ಈವರೆಗೂ 40ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಾಣ ಮಾಡಿದ್ದು, ನಿರ್ಮಾಪಕರಾಗಿ ಹಲವು ಕಲಾವಿದರನ್ನು ಚಿತ್ರರಂಗಕ್ಕೆ ಪರಿಚಯಸಿದ ಕೀರ್ತಿ ದ್ವಾರಕೀಶ್ ಅವರಿಗೆ ಇದೆ.

Exit mobile version