ನೇಹಾ ಹತ್ಯೆ: ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ? – ನಟ ಕಿಶೋರ್ ಪ್ರಶ್ನೆ

ಆದರೆ ಈ ನೋವಿನ ಕ್ಷಣದಲ್ಲೂ ಅದರಲ್ಲಿ ಹಿಂದೂ, ಮುಸ್ಲಿಂ (Hindu-Muslim) ಮಾಡುವುದು ಎಷ್ಟು ಸರಿ??? ಇಡೀ ಕೋಮಿನ (Actor Kishore Viral Statement) ಮೇಲೆ ಅಪರಾಧ ಹೊರಿಸುವುದು

ಎಷ್ಟು ಸರಿ?? ಎಂದು ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಕಿಶೋರ್ (Kishore) ಪ್ರಶ್ನಿಸಿದ್ದಾರೆ.

ನೇಹಾ ಹಿರೇಮಠ ಹತ್ಯೆ (Neha Hiremath Murder) ಯನ್ನು ಖಂಡಿಸಿ ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಬಾಳಿಬದುಕಬೇಕಾದ ಜೀವ ನೇಹಾಗೆ ನಡೆದದ್ದು ನಿಜಕ್ಕೂ ಅಕ್ಷಮ್ಯ

ಅಪರಾಧ. ಒಂದು ಪ್ರಗತಿಶೀಲ ಸಮಾಜವಾಗಿ ನಮ್ಮೆಲ್ಲರ ಸೋಲು.. ಮಹಿಳೆಯರ ವಿರುದ್ಧ ದಿನೇ ದಿನೇ ಹೆಚ್ಚುತ್ತಿರುವ ಅಪರಾಧಗಳು ಅದರ ಮೂಲ ಕಾರಣಗಳನ್ನು ನಿಯಂತ್ರಿಸಲು ನಾವು ಮತ್ತು ಸರ್ಕಾರಗಳು

ಸಾಧ್ಯ ಕ್ರಮಗಳೆಲ್ಲವನ್ನೂ (Actor Kishore Viral Statement) ಕೈಗೊಳ್ಳಬೇಕು.

ಮತ್ತಾರೂ ಇಂಥಾ ಕೃತ್ಯವೆಸಗಲು ಧೈರ್ಯಮಾಡದಂತೆ ಈಗಾಗಲೇ ಸಾಕ್ಷಿ ಸಮೇತ ಬಂಧಿತವಾಗಿರುವ ಅಪರಾಧಿಯ ತನಿಖೆ ಮತ್ತು ಅತಿ ಕಠಿಣ ಶಿಕ್ಷೆ ಆಗಲೇಬೇಕು. ದುರಂತವೆಂದರೆ ಯಾವುದೇ ಶಿಕ್ಷೆ ನೇಹಾಳನ್ನು

ತಿರುಗಿ ತರಲಾಗದು. ಆದರೆ ನಮ್ಮ ಕೈಲಿ ಸಾಧ್ಯವಾದದ್ದು ಮತ್ಯಾರೂ ನೇಹಾಳಂತೆ ಬಲಿಯಾಗದಿರುವಂತೆ ನೋಡಿಕೊಳ್ಳುವುದು. ಆದರೆ ಈ ನೋವಿನ ಕ್ಷಣದಲ್ಲೂ ಅದರಲ್ಲಿ ಹಿಂದೂ ಮುಸ್ಲಿಂ ಮಾಡುವುದು ಎಷ್ಟು

ಸರಿ??? ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ?? ಎಂದು ಪ್ರಶ್ನಿಸಿದ್ದಾರೆ.

ದಿನಕ್ಕೆ 78 ಕೊಲೆಗಳಾಗುವ, ಮಹಿಳೆಯರ ವಿರುದ್ಧ ದಿನಕ್ಕೆ 1224 ಅಪರಾಧಗಳಾಗುವ ನಾಡಿನಲ್ಲಿ ಎಷ್ಟು ಹಿಂದೂ ಎಷ್ಟು ಕ್ರೈಸ್ತ ಅಪರಾಧಿಗಳು ? ಹಾಗೆಂದರೆ ಆ ಧರ್ಮದ ನಾವೆಲ್ಲರೂ ಅಪರಾಧಿಗಳೇ?

ಹಾಗೆ ನೋಡಿದರೆ ಎಷ್ಟು ಅಂತರ್ಧರ್ಮೀಯ ಜೋಡಿಗಳು ಅನ್ಯೊನ್ಯವಾಗಿ ಬಾಳುತ್ತಿಲ್ಲ? ಅದಕ್ಕೆ ಆ ಧರ್ಮಗಳೂ ಅದರ ಜನರೂ ಜವಾಬ್ದಾರಿಯೇ ? ಹೇಗೆ ? ಅಪರಾಧಿಗೆ ನ್ಯಾಯ ಕೊಡಿಸಲು ಶ್ರಮಿಸಿವುದನ್ನು

ವಿರೋಧ ಪಕ್ಷವಾಗಲೀ ಯಾರಾಗಲೀ ಮಾಡಿದರೆ ಒಪ್ಪಲೇಬೇಕು. ಅದು ಅವರ ಕರ್ತವ್ಯ.. ಆದರೆ ಒಡೆದಾಳುವ ಈ ಧರ್ಮಾಂಧ ಜನ ನೇಹಾ ಸಾವನ್ನು ಕೋಮು ಬಣ್ಣ ಬಳಿದು ಜನರಲ್ಲಿ ದ್ವೇಷ ಹೆಚ್ಚಿಸಿ ರಾಜಕೀಯ

ಉದ್ದೇಶಕ್ಕೆ ಬಳಸುವುದು ಕೊಲೆಯಷ್ಟೇ ಘೋರ ಅಪರಾಧ ಎಂದಿದ್ದಾರೆ.

ಇದನ್ನು ಓದಿ: ಸಿದ್ದು-ಡಿಕೆಯ ಅತಿಯಾದ ಓಲೈಕೆಯಿಂದಲೇ ಮತಾಂಧ ಬ್ರದರ್ಸ್ಗಳು ಕಾನೂನು ಕೈಗೆತ್ತಿಕೊಳ್ಳುತ್ತಿದ್ದಾರೆ – ಬಿಜೆಪಿ ವಾಗ್ದಾಳಿ

Exit mobile version