ದೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹೆಸರು!

Power star

ಬೆಂಗಳೂರಿನ(Bengaluru) ಎಲೆಕ್ಟ್ರಾನಿಕ್ ಸಿಟಿಯಲ್ಲಿ(Electronic City) ನೂತವಾಗಿ ಸ್ಥಾಪಿಸಲಾಗುತ್ತಿರುವ “ಧೀರ್ಘಾಯುಷ್ಯ ಮತ್ತು ಸಾಂಕ್ರಾಮಿಕ ರೋಗ ಪರಿಹಾರ ಸಂಶೋಧನಾ ಕೇಂದ್ರಗಳ ಪೈಕಿ, ಧೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ನಟ(Actror) ಪುನೀತ್ ರಾಜ್‌ಕುಮಾರ್(Puneeth Rajkumar) ಅವರ ಹೆಸರನ್ನು ಇಡಲಾಗುವುದು ಎಂದು ಸಚಿವ(Minister) ಡಾ.ಸಿ ಅಶ್ವತ್ಥ ನಾರಾಯಣ(Ashwath Narayan) ಹೇಳಿದ್ದಾರೆ.

ಬೆಂಗಳೂರಿನಲ್ಲಿ ವಿವಿಧ ನವೋದ್ಯಮಗಳು ಅಭಿವೃದ್ಧಿಪಡಿಸಿರುವ ೬ ಜೀವವಿಜ್ಞಾನ ಸಾಧನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಆಧುನಿಕ ದಿನಮಾನದಲ್ಲಿ ಅಕಾಲಿಕ ಮರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಹೀಗಾಗಿ ಈ ಕುರಿತು ಹೆಚ್ಚಿನ ಸಂಶೋಧನೆಯ ಅಗತ್ಯವಿದೆ. ಈ ಬಗ್ಗೆ ಸಂಶೋಧನೆ ನಡೆಸಲು ವಿಶ್ವದರ್ಜೆಯ ಅಧ್ಯಯನ ಕೇಂದ್ರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಶೋಧನಾ ಕೇಂದ್ರಕ್ಕೆ ನಟ ಪುನೀತ್ ರಾಜಕುಮಾರ್ ಹೆಸರಿಡಲಾಗುವುದು.

ಇನ್ನು ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ನಿಖರ ರೋಗ ಪತ್ತೆಗೆ ರಕ್ತ, ಮಲ, ಮೂತ್ರ, ಎಂಜಲು ಇತ್ಯಾಧಿಗಳನ್ನು ಸಂಗ್ರಹಿಸಲು ಸೂಕ್ತ ವ್ಯವಸ್ಥೆ ಅವಶ್ಯಕತೆಯಿದೆ. ಹೀಗಾಗಿ ದೇಶದ ಮೊದಲ ಬಯೋ- ಬ್ಯಾಕಿಂಗ್ ಮಾದರಿಗಳ ಕೋಶವನ್ನು ಸ್ಥಾಪಿಸಲಾಗುವುದು. ಅದೇ ರೀತಿ ಬಿಬಿಬಿ ಉಪಕ್ರಮದ ಮೂಲಕ ಇದುವರೆಗೂ ೧೫೦ಕ್ಕೂ ಹೆಚ್ಚು ನವೋದ್ಯಮಗಳಿಗೆ ಸರ್ಕಾರದ ನಾನಾ ಯೋಜನೆಗಳ ಮೂಲಕ ರಚನಾತ್ಮಕ ಬೆಂಬಲ ನೀಡಲಾಗಿದೆ. ಹೀಗಾಗಿ ಬೆಂಗಳೂರು ಮುಂಬರುವ ದಿನಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿಯೂ ಹೆಚ್ಚಿನ ಮನ್ನಣೆ ಗಳಿಸಲಿದೆ.

ಬೆಂಗಳೂರಿನಲ್ಲಿ ವಿಶ್ವದರ್ಜೆಯ ಸಂಶೋಧನೆಗಳನ್ನು ನಡೆಸಲು ವಿವಿಧ ಸಂಶೋಧನಾ ಯೋಜನೆಗಳಿಗೆ ಸರ್ಕಾರ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದರು. ಇನ್ನು ಆರೋಗ್ಯ ಕ್ಷೇತ್ರದಲ್ಲಿ ಆವಿಷ್ಕಾರಕ್ಕೆ ಹೆಚ್ಚಿನ ಅವಕಾಶವಿದ್ದು, ಹೆಚ್ಚೆಚ್ಚು ಸಂಶೋಧನೆಗಳು ನಡೆಯಬೇಕಿದೆ. ಇಂದು ಬಿಡುಗಡೆಯಾಗಿರುವ ಸಾಧನಗಳಿಂದ ಕಣ್ಣು, ಕಿಡ್ನಿ, ಲಿವರ್, ಶ್ವಾಸಕೋಶ, ಹೃದಯ, ಡಿಎನ್‌ಎ ಮತ್ತು ಆರ್‌ಎನ್‌ಎ ಮೇಲಿನ ಒತ್ತಡಗಳನ್ನು ಶೀಘ್ರವಾಗಿ ಪತ್ತೆ ಹಚ್ಚಬಹುದು.

ಇದರಿಂದ ರೋಗಿಗಳಿಗೆ ತುರ್ತು ಮತ್ತು ಉತ್ತಮ ಚಿಕಿತ್ಸೆ ನೀಡಬಹುದು ಎಂದು ತಿಳಿಸಿದರು.

Exit mobile version