ಕಳಚಿದ ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ : ಚಿತ್ರನಟ ಶಿವರಾಂ ವಿಧಿವಶ

ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಪೋಷಕ ನಟರಲ್ಲಿ ಒಬ್ಬರಾಗಿದ್ದ ನಟ ಶಿವರಾಂ (84) ಅವರು ವಿಧಿವಶರಾಗಿದ್ದಾರೆ .

ಇತ್ತೀಚಿಗೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಅಪಘಾತ ಸಂಭವಿಸಿ ಶಿವರಾಂ ಅವರ ತಲೆಗೆ ಸ್ವಲ್ಪ ಪೆಟ್ಟಾಗಿತ್ತು. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ಯಾವುದೇ ಸಮಸ್ಯೆಗಳೂ ಪತ್ತೆಯಾಗಿರಲಿಲ್ಲ.  ಕಳೆದ ಮಂಗಳವಾರ ರಾತ್ರಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ನಡೆಸಲಾಗಿದ್ದು, ಪೂಜೆ ಮಾಡಲು ಶಿವರಾಂ ಅವರು ಪೂಜೆ ಮನೆಗೆ ಹೋದಾಗ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಪೆಟ್ಟಾಗಿತ್ತು. ಆಸ್ಪತ್ರೆಗೆ ದಾಖಲಿಸಿದ ವೇಳೆ ಮಿದುಳಿನಲ್ಲಿ ರಕ್ತಸ್ರಾವವಾಗಿರುವುದು ಕಂಡು ಬಂದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಅವರು ಕೋಮಾಗೆ ಜಾರಿದ್ದು, ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದರು. 

ವೃತ್ತಿ ಜೀವನ : ಶಿವರಾಮ್ ಮದ್ರಾಸ್ (Madras) ಪ್ರಾಂತದಲ್ಲಿ ಕರ್ನಾಟಕ ಮತ್ತು ತಮಿಳುನಾಡು (Tamilnadu) ರಾಜ್ಯಗಳ ಗಡಿಯಲ್ಲಿನ ಚೂಡಸಂದ್ರ ಹಳ್ಳಿಯಲ್ಲಿ 1938ರಲ್ಲಿ   ಹಿಂದೂ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು.  ಪ್ರಾಥಮಿಕ ಶಿಕ್ಷಣ (Eduvation) ಮುಗಿಸಿದ ನಂತರ ಬೆಂಗಳೂರಿಗೆ (Bengaluru) ತೆರಳಿದರು. ಗುಬ್ಬಿ ವೀರಣ್ಣ ಅವರ ನಾಟಕ ಪ್ರದರ್ಶನಗಳ ಪ್ರಭಾವಕ್ಕೆ ಒಳಗಾಗಿ ಚಿತ್ರ ತಯಾರಿಕೆ ಮತ್ತು ನಟನೆಯತ್ತ ಆಸಕ್ತಿ ತಳೆದು ನಾಟಕಗಳಲ್ಲಿ ಅಭಿನಯಿಸಲು ಆರಂಭಿಸಿದರು.   1958ರಲ್ಲಿ ಚಿತ್ರರಂಗಕ್ಕೆ ಪ್ರವೇಶಿಸಿ ಕು. ರಾ. ಸೀತಾರಾಮಶಾಸ್ತ್ರಿ ಯವರಂತಹ ವಿವಿಧ ನಿರ್ದೇಶಕರಿಗೆ ಸಹಾಯಕರಾಗಿ ಕೆಲಸ ಮಾಡಲು ಆರಂಭಿಸಿದರು

 1958 ರಿಂದ 1965 ರ ವರೆಗೆ ಸಹಾಯಕ ನಿರ್ದೇಶಕರಾಗಿ (Director) ದುಡಿದ ನಂತರ, ಅವರಿಗೆ ಕಲ್ಯಾಣ್ ಕುಮಾರ್ ನಟಿಸಿದ ಕು. ರಾ. ಸೀತಾರಾಮ ಶಾಸ್ತ್ರಿ ಅವರ ಬೆರೆತ ಜೀವ ಚಿತ್ರದಲ್ಲಿ ಪೋಷಕ ಪಾತ್ರದ ಮೂಲಕ ನಟನೆಗೆ (Acting) ಬ್ರೆ ಕ್ ಸಿಕ್ಕಿತು. ಆಗಿನಿಂದ ಅವರು 2000 ದ ದಶಕದವರೆಗೆ ಅನೇಕ ನಿರ್ದೇಶಕರ ನಿರ್ದೇಶನದಲ್ಲಿ ನಟಿಸಿದರು. ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿದ ಶರಪಂಜರ , ನಾಗರಹಾವು , ಶುಭಮಂಗಳ ಚಿತ್ರಗಳಲ್ಲಿಯೂ ನಟಿಸಿದ್ದಾರೆ. 

ಚಲಿಸುವ ಮೋಡಗಳು, ಶ್ರಾವಣ ಬಂತು , ಹಾಲು ಜೇನು , ಹೊಂಬಿಸಿಲು, ಹೊಸ ಬೆಳಕು, ಗುರು ಶಿಷ್ಯರು , ಸಿಂಹದಮರಿ ಸೈನ್ಯ , ಮಕ್ಕಳ ಸೈನ್ಯ ಇಂಥ ಅನೇಕ ಚಲನಚಿತ್ರಗಳಲ್ಲಿ ಅವರ ಹಾಸ್ಯ ಪಾತ್ರಗಳು ಜನರ ಮೆಚ್ಚುಗೆ ಪಡೆದವು. . ಅವರು ಡ್ರೈವರ್ ಹನುಮಂತು (1980) ದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು. 2000 ರ ನಂತರ ವರ್ಷಗಳಲ್ಲಿ  ಬರ ಮತ್ತು ತಾಯಿ ಸಾಹೇಬ ದಂತಹ ಸಮಾನಾಂತರ ಚಿತ್ರಗಳಲ್ಲೂ, ಆಪ್ತಮಿತ್ರ ,ಹುಚ್ಚ  ಸೆರಿದಂತೆ ಅನೇಕ ಯಶಸ್ವಿ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದರು .  ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಗೃಹಭಂಗ ಟೆಲಿವಿಷನ್ ಧಾರಾವಾಹಿ ಹಾಗೂ ರವಿಕಿರಣ್ ನಿರ್ದೇಶಿಸಿದ ಬದುಕು ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ,

Exit mobile version