ರಸ್ತೆ ನಿರ್ಮಾಣ ವಿಚಾರಕ್ಕೆ ನಟ ಯಶ್‌ ತಂದೆ-ತಾಯಿ ಹಾಗೂ ಗ್ರಾಮಸ್ಥರ ನಡುವೆ ಗಲಾಟೆ

ಹಾಸನ, ಮಾ. 09: ಜಮೀನಿಗೆ ರಸ್ತೆ ನಿರ್ಮಿಸುವ ವಿಚಾರವಾಗಿ ರಾಕಿಂಗ್‌ ಸ್ಟಾರ್‌ ಯಶ್‌ ತಂದೆ-ತಾಯಿ ಹಾಗೂ ಗ್ರಾಮದ ಜನರ ನಡುವೆ ಗಲಾಟೆ ನಡೆದಿರುವ ಘಟನೆ ನಡೆದಿದೆ.

ಜಮೀನಿಗೆ ರಸ್ತೆ ನಿರ್ಮಿಸಲು ಯಶ್‌ ಪೋಷಕರಾದ ಅರುಣ್‌ ಕುಮಾರ್‌, ಪುಷ್ಪಾ ಅವರು ತಿಮ್ಮೇನಹಳ್ಳಿ ಗ್ರಾಮದ ಜಮೀನಿನಲ್ಲಿ ಜೆಸಿಬಿಯಿಂದ ಕೆಲಸ ಮಾಡಿಸುತ್ತಿದ್ದರು. ಇದನ್ನು ವಿರೋಧಿಸಿ ಗ್ರಾಮಸ್ಥರು ಗಲಾಟೆ ಮಾಡಿದ್ದಾರೆ.

ಈ ವೇಳೆ ನಟ ಯಶ್‌ ತಂದೆ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಗ್ರಾಮಸ್ಥರು ಮತ್ತು ಯಶ್‌ನ ಕೆಲ ಬೆಂಬಲಿಗರು ಕೈ ಕೈ ಮಿಲಾಯಿಸಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಸಿದ್ದಾರೆ.

Latest News

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,