ಯೋಗಕ್ಕೆ ಒಂದು ಧರ್ಮದ ಹಣೆಪಟ್ಟಿ ಕಟ್ಟಲಾಗಿದೆ : ಅದಿತಿ ಪ್ರಭುದೇವ!

ಯೋಗಕ್ಕೆ(Yoga) ಭಾರತೀಯ ಪರಂಪರೆಯಲ್ಲಿ ಉನ್ನತ ಸ್ಥಾನ ನೀಡಲಾಗಿದೆ. ಯೋಗದಿಂದ ದೇಹ, ಮನಸ್ಸು, ಆತ್ಮ, ಪರಿಶುದ್ದ ಪರಮಾತ್ಮನನ್ನು ಒಟ್ಟಿಗೆ ಸೇರಿಸುತ್ತದೆ. ಯೋಗದಿಂದ ನಮ್ಮನ್ನು ನಾವು ಅರಿತುಕೊಳ್ಳಲು ಸಹಾಯಕವಾಗುತ್ತದೆ. ಪ್ರತಿದಿನ ಯೋಗ ಮಾಡುವುದರಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೆರವಾಗುತ್ತದೆ. ಆದರೆ ಇಂದು ಯೋಗಕ್ಕೆ ಒಂದು ಧರ್ಮದ ಹಣೆಪಟ್ಟಿ ಕಟ್ಟಲಾಗಿದೆ ಎಂದು ನಟಿ(Actress) ಅದಿತಿ ಪ್ರಭುದೇವ(Aditi Prabhudeva) ಅಭಿಪ್ರಾಯಪಟ್ಟರು.

‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’(International Yoga Day) ಹಿನ್ನೆಲೆ ಬೆಂಗಳೂರಿನ(Bengaluru) ಮಲೇಶ್ವರಂನಲ್ಲಿರುವ(Malleshwaram) ಬಿಜೆಪಿ ಕಚೇರಿಯಲ್ಲಿ(BJP Office) ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾತನಾಡಿದ ಅವರು, ನಮ್ಮ ಪರಂಪರೆಯ ಪ್ರಕಾರ ಯೋಗ ಒಂದು ಬ್ರಹ್ಮಾಂಡ. ಯೋಗದಿಂದ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ. ಹೀಗಾಗಿ ನಾವೆಲ್ಲರೂ ಯೋಗವನ್ನು ನಮ್ಮ ಬದುಕಿನ ಭಾಗವಾಗಿಸಿಕೊಳ್ಳಬೇಕೆಂದು ಕರೆ ನೀಡಿದರು.

ಇನ್ನು ಇದೇ ವೇಳೆ ವ್ಯಾಸ ಯೋಗ ವಿವಿ ಕುಲಪತಿ ಡಾ.ಬಿ.ಆರ್.ರಾಮಕೃಷ್ಣ ಮಾತನಾಡಿ, ಜೀವನ ಶೈಲಿ ಸರಿಯಾಗಿ ರೂಢಿಸಿಕೊಂಡರೆ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ. ಬಿಜೆಪಿ ಪಕ್ಷವನ್ನು ಬಲಗೊಳಿಸಬೇಕಾದರೆ ಕಾರ್ಯಕರ್ತರೆಲ್ಲರೂ ಯೋಗ ಮಾಡಬೇಕು. ಯೋಗ ನಮ್ಮನ್ನು ಉತ್ತಮ ರೀತಿಯಲ್ಲಿ ರೂಪಿಸುತ್ತದೆ ಎಂದರು. ಇನ್ನು ಈ ಕಾರ್ಯಕ್ರಮದ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ವಹಿಸಿದ್ದರು.

ಈ ವೇಳೆ ಮಾತನಾಡಿದ ಅವರು, ಮನಸ್ಸು, ,ಆತ್ಮಶಕ್ತಿ, ಬುದ್ಧಿ, ಶ್ರದ್ದೆ, ಆತ್ಮದ ಏಕಾಗ್ರತೆ, ಉತ್ತಮ ಚಾರಿತ್ರ್ಯ, ಸಾಧಿಸಲು ಯೋಗದಿಂದ ಸಾಧ್ಯ. ಯೋಗ ಸುಂದರವಾದ ಆಧ್ಯಾತ್ಮದ ದಾರಿ. ಯೋಗ ಮಾಡುವವರೆಲ್ಲರಿಗೂ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು(Narendra Modi) ಸ್ಪೂರ್ತಿಯಾಗಿದ್ದಾರೆ ಎಂದು ತಿಳಿಸಿದರು.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.