ಆದಿಚುಂಚನಗಿರಿ ಶ್ರೀ ಮಠದಿಂದ ಸ್ಲಂ ಮಕ್ಕಳಿಗೆ ಉಚಿತ ಶಿಕ್ಷಣದ ಚಿಂತನೆ: ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು, ಡಿ. 23: ರಾಜಧಾನಿ ಬೆಂಗಳೂರಿನಲ್ಲಿರುವ ಎಲ್ಲೆಲ್ಲಿ ಸ್ಲಂ ಮಕ್ಕಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣ ಸಿಗಬೇಕಿದ್ದು, ಈ ಕೆಲಸವನ್ನು ಆದಿಚುಂಚನಗಿರಿ ಮಠದಿಂದ ಮಾಡಲಿದ್ದು, ಸರ್ಕಾರದ ಕಡೆಯಿಂದ ಜಾಗವಿದ್ದರೆ ಸಾಕು ಎಂದು ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ಹೇಳಿದ್ದಾರೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

ವಿಜಯನಗರದ ಆದಿಚುಂಚನಗಿರಿ ಶ್ರೀಮಠಕ್ಕೆ ಭೇಟಿ ನೀಡಿ, ಡಾ. ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಚಿವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಬೆಂಗಳೂರಿನ ಶೀಪೀಠದಲ್ಲಿದ್ದಾರೆಂದರೆ ಆಗಾಗ ಭೇಟಿ ಕೊಡುವ ಪರಿಪಾಠವನ್ನು ಹೊಂದಿದ್ದೇನೆ. ಇಂದು ಸಹ ಸ್ವಾಮೀಜಿ ಅವರ ಆಶೀರ್ವಾದ ಪಡೆದಿದ್ದೇನೆ ಎಂದು ತಿಳಿಸಿದರು.

ಕೊರೋನಾ ಎರಡನೇ ಅಲೆ ಬಗ್ಗೆ ಭಯ ಪಡಬೇಕಾದ ಅಗತ್ಯವಿಲ್ಲ. ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ಸ್ಯಾನಿಟೈಸ್ ಬಳಕೆಮಾಡಬೇಕು. ಜೊತೆಗೆ ಕೇಂದ್ರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇನ್ನು ನಾಲ್ಕೈದು ತಿಂಗಳು ಹೆಚ್ಚಿನ ಜಾಗ್ರತೆಯನ್ನು ವಹಿಸಬೇಕು ಎಂದು ಸಚಿವರು ಕರೆ ನೀಡಿದರು.

Exit mobile version