Visit Channel

94 ನೇ ವಸಂತಕ್ಕೆ ಕಾಲಿಟ್ಟ ಅಡ್ವಾಣಿ

ನವದೆಹಲಿ ನ 08 : ಮಾಜಿ ಉಪಪ್ರಧಾನಿ, ಬಿಜೆಪಿಯ ಭೀಷ್ಮ ಎಂದೇ ಪರಿಗಣಿಸಲ್ಪಟ್ಟಿರುವ ಎಲ್ ಕೆ ಅಡ್ವಾಣಿ ಇಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರುಗಳಿಂದ ಶುಭಾಶಯಗಳ ಮಹಾಪೂರ ಹರಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ ಮತ್ತು ಅವರಿಂದ ಆಶೀರ್ವಾದ ಪಡೆದು ಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, “ಗೌರವಾನ್ವಿತ ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಪೂರ್ಣ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ. ಜನರ ಸಬಲೀಕರಣ ಮತ್ತು ಸಾಂಸ್ಕೃತಿಕ ಹೆಮ್ಮೆಯನ್ನು ವೃದ್ಧಿಸುವಲ್ಲಿ ಅವರ ಅಪಾರ ಕೊಡುಗೆಗೆ ಈ ದೇಶ ಚಿರಋಣಿಯಾಗಿದೆ. ಅವರ ಪಾಂಡಿತ್ಯ ಮತ್ತು ಶ್ರೀಮಂತ ಜ್ಞಾನಕ್ಕಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಡುತ್ತಿದ್ದಾರೆ” ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೀಪಿನ ಅವರು ಕೂಡ ಎಲ್ ಕೆ ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದು, ಪಕ್ಷವನ್ನು ಜನರ ಬಳಿಗೆ ತಲುಪಿಸುವಲ್ಲಿ ಅಡ್ವಾನಿ ಮಹತ್ವದ ಕಾರ್ಯ ನಿರ್ವಹಿಸಿದ್ದಾರೆ ಮತ್ತು ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಅಡ್ವಾಣಿ ಅವರು ಸ್ಪೂರ್ತಿದಾಯಕ ಮತ್ತು ಮಾರ್ಗದರ್ಶಿ ವ್ಯಕ್ತಿತ್ವ ಎಂದು ಶ್ಲಾಘಿಸಿದ್ದಾರೆ.

Latest News

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.