• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಬಲಿ : ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಗುಂಡೇಟಿಗೆ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಬಲಿ : ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ
0
SHARES
15
VIEWS
Share on FacebookShare on Twitter
  • ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ (again protests in bangladesh) ಸಾವು : ಬಾಂಗ್ಲಾದೇಶದಲ್ಲಿ ಮತ್ತೆ ಅಶಾಂತಿ ಅಲೆ
  • ಢಾಕಾದಲ್ಲಿ ಭಾರೀ ಪ್ರತಿಭಟನೆ, ರಾಜಕೀಯ ಉದ್ವಿಗ್ನತೆ
  • ಮಾಧ್ಯಮ ಕಚೇರಿಗಳ ಮೇಲೆ ದಾಳಿ, ಅವಾಮಿ ಲೀಗ್ ಕಚೇರಿಗೆ ಬೆಂಕಿ

Dhaka: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮತ್ತು ರಾಜಕೀಯ ಅಶಾಂತಿ (again protests in bangladesh) ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದೆ.

ಇತ್ತೀಚೆಗೆ ವಿದ್ಯಾರ್ಥಿಗಳ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿ ವಿದ್ಯಾರ್ಥಿ ನಾಯಕನೆಂದೇ ಗುರುತಿಸಿಕೊಂಡಿದ್ದ ಷರೀಫ್ ಉಸ್ಮಾನ್ (Sharif Usman Hadi) ಹಾದಿ ಅವರ ಹತ್ಯೆ, ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.

ಅವರ ಸಾವಿನ ಸುದ್ದಿ ಹೊರಬಿದ್ದ ತಕ್ಷಣವೇ ರಾಜಧಾನಿ ಢಾಕಾ ಸೇರಿದಂತೆ ಹಲವು ನಗರಗಳಲ್ಲಿ ಭಾರೀ ಪ್ರತಿಭಟನೆಗಳು ಆರಂಭವಾಗಿದ್ದು, ರಸ್ತೆಗಳಲ್ಲಿ ಜನಸಾಗರವೇ ಹರಿದು ಬಂದಿದೆ.

ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪರಿಸ್ಥಿತಿ ಕೈಮೀರದಂತೆ ತಡೆಯಲು ಸರ್ಕಾರ ತುರ್ತು (again protests in bangladesh) ಕ್ರಮಗಳನ್ನು ಕೈಗೊಳ್ಳುತ್ತಿದೆ.

ಅಷ್ಟಕ್ಕೂ ಷರೀಫ್ ಉಸ್ಮಾನ್ ಹಾದಿ ಅವರು ಬಾಂಗ್ಲಾದೇಶದ (Bangladesh) ವಿದ್ಯಾರ್ಥಿ ಚಳವಳಿಯ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿದ್ದರು.

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತದ ವಿರುದ್ಧ ನಡೆದ ಹೋರಾಟಗಳಲ್ಲಿ ಅವರು ಮುಂಚೂಣಿಯಲ್ಲಿ ನಿಂತಿದ್ದರು.

ಕಳೆದ ವಾರ ಮುಸುಕುಧಾರಿಗಳ ಗುಂಪೊಂದು ಅವರ ಮೇಲೆ ಗುಂಡಿನ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಸಿಂಗಾಪುರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ಸಿಂಗಾಪುರ ಮೂಲಗಳು ಖಚಿತಪಡಿಸಿವೆ. ಈ ಸುದ್ದಿ ಬಾಂಗ್ಲಾದೇಶಕ್ಕೆ ತಲುಪುತ್ತಿದ್ದಂತೆಯೇ ಜನರ ಆಕ್ರೋಶ ಸ್ಫೋಟಗೊಂಡಿದೆ.

ಉಸ್ಮಾನ್ ಹಾದಿ ಅವರ ಸಾವಿನ ನಂತರ ಪ್ರತಿಭಟನಾಕಾರರು ಮಾಧ್ಯಮ ಸಂಸ್ಥೆಗಳನ್ನೂ ಗುರಿಯಾಗಿಸಿಕೊಂಡಿದ್ದಾರೆ.

ಢಾಕಾದ ಕಾರ್ವಾನ್ ಬಜಾರ್ ಪ್ರದೇಶದಲ್ಲಿರುವ ದೇಶದ ಪ್ರಮುಖ ಪತ್ರಿಕೆ ಪ್ರಥಮ್ ಅಲೋ ಕಚೇರಿಯ ಮೇಲೆ ದಾಳಿ ನಡೆಸಿ, ಕಟ್ಟಡದ ಭಾಗಗಳನ್ನು ಧ್ವಂಸಗೊಳಿಸಲಾಗಿದೆ. ಕಚೇರಿಯೊಳಗಿನ ಪೀಠೋಪಕರಣಗಳು, ದಾಖಲೆಗಳಿಗೆ ಬೆಂಕಿ ಹಚ್ಚಲಾಗಿದೆ. ಇದೇ ರೀತಿ ಡೈಲಿ ಸ್ಟಾರ್ ಪತ್ರಿಕೆಯ ಕಚೇರಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ರಾಜ್‌ಶಾಹಿ ನಗರದಲ್ಲಿರುವ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷದ ಕಚೇರಿಯ ಮೇಲೂ ದಾಳಿ ನಡೆದಿದ್ದು, ಪರಿಸ್ಥಿತಿ ಮತ್ತಷ್ಟು ಉದ್ವಿಗ್ನವಾಗಿದೆ.

ಇನ್ನೂ ಚಿತ್ತಗಾಂಗ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಡೆದ ಪ್ರತಿಭಟನೆಗಳ ವೇಳೆ ಭಾರತ ವಿರೋಧಿ ಹಾಗೂ ಅವಾಮಿ ಲೀಗ್ ವಿರೋಧಿ ಘೋಷಣೆಗಳು ಮೊಳಗಿವೆ. ಭಾರತೀಯ ಹೈಕಮಿಷನ್ ಕಚೇರಿಯ ಹೊರಗಡೆಯೂ ಪ್ರತಿಭಟನಾಕಾರರು ಜಮಾಯಿಸಿ ಕಲ್ಲು ತೂರಾಟ ನಡೆಸಿದ್ದಾರೆ.

ಇದರಿಂದ ಭದ್ರತಾ ಆತಂಕ ಹೆಚ್ಚಾಗಿದ್ದು, ವೀಸಾ ಅರ್ಜಿ ಸ್ವೀಕರಿಸುವ ಎರಡು ಕೇಂದ್ರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಹಿಂಸಾಚಾರ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ಅವರು ತುರ್ತು ರಾಜ್ಯಮಟ್ಟದ ಸಭೆ ಕರೆದಿದ್ದು, ಶಾಂತಿ ಕಾಪಾಡುವ ಕುರಿತು ಚರ್ಚೆ ನಡೆಸಿದ್ದಾರೆ.

ಷರೀಫ್ ಉಸ್ಮಾನ್ ಹಾದಿ ಅವರು ಕೇವಲ ವಿದ್ಯಾರ್ಥಿ ನಾಯಕ ಮಾತ್ರವಲ್ಲದೆ, ಬಾಂಗ್ಲಾದೇಶದ ರಾಜಕೀಯ ಭವಿಷ್ಯದಲ್ಲಿ ಪ್ರಮುಖ ಪಾತ್ರ ವಹಿಸುವ ನಾಯಕನಾಗಿ ಕಾಣಿಸಿಕೊಂಡಿದ್ದರು.

ತಮ್ಮ ಭಾಷಣಗಳಲ್ಲಿ ಅವರು ಭಾರತವನ್ನು ತೀವ್ರವಾಗಿ ಟೀಕಿಸುತ್ತಿದ್ದುದರಿಂದ ಸಾಕಷ್ಟು ವಿವಾದಗಳಿಗೂ ಕಾರಣರಾಗಿದ್ದರು.

2026ರ ಫೆಬ್ರವರಿಯಲ್ಲಿ ನಡೆಯಲಿರುವ ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗಿದ್ದರು ಎನ್ನಲಾಗಿತ್ತು. ಅವರ ಅಕಾಲಿಕ ಮರಣವು ದೇಶದ ರಾಜಕೀಯ ಸ್ಥಿತಿಗತಿಗಳ ಮೇಲೆ ದೂರಗಾಮಿ ಪರಿಣಾಮ ಬೀರುವ ಸಾಧ್ಯತೆ ಇದೆ.

ಪ್ರಸ್ತುತ ಬಾಂಗ್ಲಾದೇಶದಲ್ಲಿ ಶಾಂತಿ ಸ್ಥಾಪನೆ ಸರ್ಕಾರದ ಮುಂದೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇದನ್ನು ಓದಿ : https://vijayatimes.com/bpl-cards-cancelled-based-on-criteria/
Tags: BangaladeshDhakastudentleader

Related News

ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ
ದೇಶ-ವಿದೇಶ

ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ

January 21, 2026
ಬ್ಯಾನರ್ ಗಲಾಟೆಗಳ ಬಳಿಕ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು
ಪ್ರಮುಖ ಸುದ್ದಿ

ಬ್ಯಾನರ್ ಗಲಾಟೆಗಳ ಬಳಿಕ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು

January 21, 2026
ಜಿಬಿಎ ಚುನಾವಣೆಗೆ ಆಯೋಗ ಸಜ್ಜು : ಬ್ಯಾಲೆಟ್ ಪೇಪರ್ ಮೂಲಕ ಮತದಾನ, ಕರಡು ಮತದಾರರ ಪಟ್ಟಿ ಪ್ರಕಟ
ಪ್ರಮುಖ ಸುದ್ದಿ

ಜಿಬಿಎ ಚುನಾವಣೆಗೆ ಆಯೋಗ ಸಜ್ಜು : ಬ್ಯಾಲೆಟ್ ಪೇಪರ್ ಮೂಲಕ ಮತದಾನ, ಕರಡು ಮತದಾರರ ಪಟ್ಟಿ ಪ್ರಕಟ

January 20, 2026
ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ
ರಾಜಕೀಯ

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

January 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.