• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರೈಲು ಆಧಾರಿತ ಮೊಬೈಲ್ ಲಾಂಚರ್​​ನಿಂದ ಅಗ್ನಿ ಪ್ರೈಮ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ, ಇನ್ಮುಂದೆ ರೈಲಿನಿಂದಲೂ ಶತ್ರುಗಳ ಮೇಲೆ ದಾಳಿ ನಡೆಸಬಹುದು

Shwetha Mohan by Shwetha Mohan
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ರೈಲು ಆಧಾರಿತ ಮೊಬೈಲ್ ಲಾಂಚರ್​​ನಿಂದ ಅಗ್ನಿ ಪ್ರೈಮ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ, ಇನ್ಮುಂದೆ ರೈಲಿನಿಂದಲೂ ಶತ್ರುಗಳ ಮೇಲೆ ದಾಳಿ ನಡೆಸಬಹುದು
0
SHARES
14
VIEWS
Share on FacebookShare on Twitter
  • 2,000 ಕಿಮೀ ವ್ಯಾಪ್ತಿಯ ಯಾವ್ದೇ ಗುರಿಯನ್ನು ಹೊಡೆದುರುಳಿಸುತ್ತೆ ಅಗ್ನಿ ಪ್ರೈಮ್‌
  • ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಭಾರತ
  • ಇನ್ಮುಂದೆ ರೈಲಿನಿಂದಲೂ ಶತ್ರುಗಳ ಮೇಲೆ ದಾಳಿ ನಡೆಸಬಹುದು (Agni Prime missile test successful)

New Delhi: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅಗ್ನಿ-ಪ್ರೈಮ್ ಕ್ಷಿಪಣಿಯನ್ನು ರೈಲು ಆಧಾರಿತ ಮೊಬೈಲ್ ಲಾಂಚರ್​​ನಿಂದ ಉಡಾಯಿಸಿ ಪರೀಕ್ಷೆಸಿದ್ದು ಪರೀಕ್ಷೆ ಯಶಸ್ವಿಯಾಗಿದೆ.

ಇದು ರಕ್ಷಣಾ ವಲಯದಲ್ಲಿ ಭಾರತ ಮತ್ತೊಂದು ಪ್ರಮುಖ ಪ್ರಗತಿಯನ್ನು ಸಾಧಿಸಿದಂತಾಗಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh), ಸೋಶಿಯಲ್ ಮೀಡಿಯಾದಲ್ಲಿ ಇದರ ಬಗ್ಗೆ ಮಾಹಿತಿ ನೀಡಿದಾರೆ. ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ರಕ್ಷಣಾ ಕ್ಷೇತ್ರಕ್ಕೆ(Defense sector) ಭಾರತ ಹೆಚ್ಚಿನ ಆದ್ಯತೆ ನೀಡುತ್ತಿದೆ.

ಸ್ವದೇಶಿ ಅಸ್ತ್ರಗಳನ್ನು ಸೇನೆಗೆ ಸೇರ್ಪಡೆ ಮಾಡಿಕೊಳ್ಳುತ್ತಲೇ ಇದೆ ಈ ಸಾಲಿಗೆ ಮತ್ತೊಂದು ಶಕ್ತಿಶಾಲಿ ಅಸ್ತ್ರ ಅಗ್ನಿ ಪ್ರೈಮ್‌ ಕೂಡ ಸೇರ್ಪಡೆಯಾಗಿದೆ.

ಭಾರತ(India) ತನ್ನ ರಕ್ಷಣಾ ಸಾಮರ್ಥ್ಯ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನಿಟ್ಟಿದ್ದು ರೈಲು-ಆಧಾರಿತ ಮೊಬೈಲ್ ಲಾಂಚರ್‌ನಿಂದ ಹೊಸ ತಲೆಮಾರಿನ ಬ್ಯಾಲಿಸ್ಟಿಕ್ ಕ್ಷಿಪಣಿಯಾದ

ಅಗ್ನಿ-ಪ್ರೈಮ್‌ ಕ್ಷಿಪಣಿಯಾನ್ನ (Agni Prime Missile) ಯಶಸ್ವಿಯಾಗಿ ಪರೀಕ್ಷಿಸಿದೆ.

Agni Prime missile test successful
ಈ ಕ್ಷಿಪಣಿಯಾನ್ನು ಒಡಿಶಾದ (Odisha) ಬಾಲಾಸೋರ್‌ನಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ(Dr. APJ Abdul Kalam Island) ಪರೀಕ್ಷಿಸಲಾಗಿದೆ.

ಈ ಕ್ಷಿಪಣಿಯು ತನ್ನ ಗುರಿ ನಿಖರವಾಗಿ ತಲುಪುವ ಸಾಮರ್ತ್ಯವೊಂದಿದ್ದು, 2,000 ಕಿಲೋಮೀಟರ್‌ವರೆಗಿನ ಗುರಿಗಳನ್ನು ತಲುಪುತ್ತದೆ.

ವಿಶೇಷವಾಗಿ ವಿನ್ಯಾಸಗೊಳಿಸಲಾದ ಮಿಸೈಲ್‌ ಸುಧಾರಿತ ಸಂಚರಣೆ, ಮಾರ್ಗದರ್ಶಿ ವ್ಯವಸ್ಥೆ ಹೊಂದಿರುವ ಇದು ಹೆಚ್ಚಿನ ನಿಖರತೆಯೊಂದಿಗೆ ಗುರಿ ತಲುಪುವ ಸಾಮರ್ಥ್ಯ ಹೊಂದಿದೆ.

ಅಲ್ಲದೇ ಕ್ಷಿಪಣಿಯು ತ್ವರಿತವಾಗಿ ವಿವಿಧ ಸ್ಥಳಗಳಿಗೆ ಸ್ಥಳಾಂತರಿಸಲು ಮತ್ತು ಉಡಾವಣೆಗೊಳಿಸಲು ಅನುಕೂಲವಾಗಿದೆ. ಈ‌ ಯಶಸ್ವಿ ಪರೀಕ್ಷೆಯಿಂದ ಭಾರತ ಮೊಬೈಲ್ ರೈಲು ಜಾಲಗಳಿಂದ (ಆನ್ ದಿ ಮೂವ್)

ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯ ಹೊಂದಿರುವ ಹಾಗೂ ಕ್ಯಾನಿಸ್ಟರೈಸ್ಡ್ ಉಡಾವಣಾ ವ್ಯವಸ್ಥೆ ಹೊಂದಿರುವ ಆಯ್ದ ದೇಶಗಳ ಗುಂಪಿಗೆ ಸೇರಲಿದೆ.

ಇನ್ನೂ ಭಾರತದ ಬಳಿ ಅಗ್ನಿ-1 ರಿಂದ ಅಗ್ನಿ-5 ರವರೆಗಿನ ಕ್ಷಿಪಣಿಗಳಿವೆ. ಅಗ್ನಿ-1 ರಿಂದ ಅಗ್ನಿ-4 ರವರೆಗಿನ ಕ್ಷಿಪಣಿಗಳು 700 ಕಿ.ಮೀ ನಿಂದ 3,500 ಕಿ.ಮೀ ವರೆಗೆ ಗುರಿ ತಲುಪುವ ಸಾಮರ್ಥ್ಯ ಹೊಂದಿದ್ದರೆ,

ಅಗ್ನಿ-5 5,000 ಕಿ.ಮೀ ವರೆಗೆ ಗುರಿ ತಲುಪುವ ಸಾಮರ್ಥ್ಯ ಹೊಂದಿದೆ.

ರೈಲಿನಿಂದ ಉಡಾಯಿಸಬಹುದಾದ ಮೊಬೈಲ್‌ ಲಾಂಚರ್‌ ಮಧ್ಯಂತರ ಶ್ರೇಣಿಯ ʻಅಗ್ನಿ ಪ್ರೈಮ್‌ ಕ್ಷಿಪಣಿʼಯು 2,000 ಕಿಮೀ ವರೆಗೂ ನುಗ್ಗಿ ತನ್ನ ಗುರಿಯನ್ನ ಹೊಡೆಯುತ್ತೆ.

ಈ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ತಮ್ಮ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿಯೊಂದು ಕ್ಷಣದಲ್ಲೂ ಆತ್ಮನಿರ್ಭರಕ್ಕಾಗಿ ಒತ್ತು ನೀಡುವ ಮೂಲಕ ರಕ್ಷಣಾ ಸಾಮರ್ಥ್ಯದಲ್ಲಿ ಸ್ವಾವಲಂಬನೆಯಾಗುತ್ತಿರುವುದು ಹೆಮ್ಮೆಯ ವಿಚಾರ ಎಂದು ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಭಾರತ ರೈಲು ಆಧಾರಿತ ಮೊಬೈಲ್‌ ಲಾಂಚರ್‌ ವ್ಯವಸ್ಥೆಯಿಂದ ಮಧ್ಯಂತರ ಶ್ರೇಣಿಯ ಕ್ಷಿಪಣಿಯ ಯಶಸ್ವಿ ಉಡಾವಣೆ ನಡೆಸಿದೆ.

ಅದಕ್ಕಾಗಿ ಭದ್ರತಾ ಪಡೆಗಳು ಹಾಗೂ DRDO, SFCಗೂ ಅಭಿನಂದನೆ ಸಲ್ಲಿಸುತ್ತೇನೆ. ಈ ಮುಂದಿನ ಪೀಳಿಗೆಯ ಕ್ಷಿಪಣಿಯನ್ನು 2000 ಕಿ.ಮೀ.ವರೆಗಿನ ವ್ಯಾಪ್ತಿಯನ್ನು ಕ್ರಮಿಸಲು ವಿನ್ಯಾಸಗೊಳಿಸಲಾಗಿದೆ.

ಇದನ್ನು ಓದಿ : ಬಿಎಂಟಿಸಿ ಬಸ್​ ಚಾಲಕರೇ ಬಸ್​ ಚಾಲನೆ ವೇಳೆ ಮೊಬೈಲ್​ ಬಳಸಿದ್ರೆ ಅಮಾನತು, ವರ್ಗಾವಣೆ ಶಿಕ್ಷೆ ಕನ್ಫರ್ಮ್

ವಿವಿಧ ಸುಧಾರಿತ ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ ಎಂದು ತಮ್ಮ ಎಕ್ಸ್‌ನಲ್ಲಿ ಹೇಳಿದ್ದಾರೆ. (Agni Prime missile test successful)

Tags: Agni Prime missileDefense sectorDr. APJ Abdul Kalam IslanddrdoIndiaNew DelhiPM Narendra Modirajnath singh

Related News

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025
2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ
ದೇಶ-ವಿದೇಶ

2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.