Karnataka : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೀಗ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ (AIMIM candidates list released) ತಮ್ಮ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.

ಈ ಬಾರಿ ಕರ್ನಾಟಕ ಮತ್ತು ರಾಜಸ್ಥಾನ ಎರಡು ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧೆ ನಡೆಸಲಿದೆ ಎಂದು ಅಸಾದುದ್ದೀನ್ ಓವೈಸಿ ಗುರುವಾರ ಹೇಳಿದ್ದಾರೆ.
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷವು ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಅನ್ನು ಪ್ರಕಟಿಸಿದೆ.
ಪಟ್ಟಿಯಲ್ಲಿ ಮೂರು ಹೆಸರುಗಳನ್ನು ಪಕ್ಷದಿಂದ ಘೋಷಿಸಲಾಗಿದ್ದು, ಇನ್ನಷ್ಟು ಹೆಸರುಗಳನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದೆ. ಎಐಎಂಐಎಂ(AIMIM) ಪಕ್ಷ ನೀಡಿರುವ ಮಾಹಿತಿ ಪ್ರಕಾರ,
ಬೆಳಗಾವಿ ಉತ್ತರದಿಂದ ಲತೀಫ್ ಖಾನ್ ಅಮೀರ್ ಖಾನ್ ಪಠಾಣ್, ಹುಬ್ಬಳ್ಳಿ ಧಾರವಾಡ ಪೂರ್ವದಿಂದ ದುರ್ಗಪ್ಪ ಕಾಶಪ್ಪ ಬಿಜವಾಡ ಮತ್ತು ಬಸವನ ಭಾಗೇವಾಡಿಯಿಂದ ಅಲ್ಲಾಬಕ್ಷ್ ಮೆಹಬೂಬ್ ಸಾಬ್ ಬಿಜಾಪುರ ಕರ್ನಾಟಕದಲ್ಲಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ.

ಕರ್ನಾಟಕ ಮತ್ತು ರಾಜಸ್ಥಾನ ಎರಡರಲ್ಲೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಎಐಎಂಐಎಂ(AIMIM) ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಗುರುವಾರ ಅಧಿಕೃತವಾಗಿ ಘೋಷಿಸಿದರು.
ಇದೇ ವರ್ಷಾಂತ್ಯದಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುವಂತೆ ಅವರು ಕಾರ್ಯಕರ್ತರಲ್ಲಿ (AIMIM candidates list released) ಮನವಿ ಮಾಡಿಕೊಂಡಿದ್ದಾರೆ.
ಬಿಜೆಪಿಯ ದ್ವೇಷ ರಾಜಕಾರಣವನ್ನು ಎದುರಿಸಲು ಪಕ್ಷದ ಕಾರ್ಯಕರ್ತರು ಅದರ ಹೊಲಸು ರಾಜಕಾರಣವನ್ನು ಹೊರ ಹಾಕಲು ಹೆಚ್ಚು ಶ್ರಮಿಸಬೇಕು ಎಂದು ಹೇಳಿದ್ದಾರೆ.
ತೆಲಂಗಾಣ ಕೋಮು ದ್ವೇಷದಿಂದ ಮುಕ್ತವಾಗಿದೆ ಮತ್ತು ವಾಸ್ತವವಾಗಿ ತೆಲಂಗಾಣದ ಜಿಡಿಪಿ ದೇಶದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಿಂತ ಹೆಚ್ಚಾಗಿದೆ.
ಮತದಾನ ಮಾಡಲು ಹೊರಡುವ ಮೊದಲು ಮನೆಯಲ್ಲಿರುವ ಗ್ಯಾಸ್ ಸಿಲಿಂಡರ್‌ಗಳಿಗೆ ‘ನಮಸ್ಕಾರ’ ಮಾಡುವಂತೆ ನಾನು ಎಲ್ಲ ರಾಜ್ಯಗಳ ಜನರಿಗೆ ಮನವಿ ಮಾಡುತ್ತೇನೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಇದೇ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ ಮತ್ತು ಕರ್ನಾಟಕದಲ್ಲಿ ಎಐಎಂಐಎಂ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು ಇದೇ ಮೊದಲು ಎಂದು ಹೇಳಿದರು.