ಟಾಟಾ ಗ್ರೂಪ್‌ ಪಾಲಾದ ಏರ್ ಇಂಡಿಯಾ

ನವದೆಹಲಿ ಅ 2 : ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಹರಸಾಹಸಕ್ಕೆ ಕೊನೆಗೂ ಮುಕ್ತಿ ದೊರೆತಿದ್ದು, ಟಾಟಾ ಸಮೂಹ ಹರಾಜಿನಲ್ಲಿ ಏರ್ ಇಂಡಿಯಾವನ್ನು ಖರೀದಿ ಮಾಡಿದೆ.

ಇಂದು ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿ ಸಂಬಂಧ ಬಿಡ್ ನಡೆಸಲಾಯಿತು. ಈ ಬಿಡ್ ನಲ್ಲಿ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದವು. ಅಂತಿಮವಾಗಿ ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್ ಸಂಸ್ಥೆ ಖರೀದಿಸುವಲ್ಲಿ ಸಫಲವಾಗಿದೆ ಎಂದು ಬ್ಲೂಮರ್ಗ್ ವರದಿ ಮಾಡಿದೆ.

ಈ ಬಗ್ಗೆ ಸುದ್ದಿಸಂಸ್ಥೆಗಳು ವರದಿ ಮಾಡಿದ್ದು, ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್ ಸಂಸ್ಥೆ ಬಹುದೊಡ್ಡ ಮೊತ್ತ ನೀಡಿ ಖರೀದಿ ಮಾಡಿದೆ ಎನ್ನಲಾಗಿದೆ.

ಪುನಃ ಟಾಟಾ ಗ್ರೂಪ್‌ ಪಾಲಾದ ಏರ್ ಇಂಡಿಯಾ

 ಇನ್ನು ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ನದ್ದೇ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿದ್ದರು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣಗೊಳಿಸಲಾಯಿತು ಮತ್ತು ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಯಿತು ಮತ್ತು ಜುಲೈ 29, 1946 ರಂದು ಏರ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು.

1953 ರಲ್ಲಿ, ಸರ್ಕಾರವು ಏರ್ ಕಾರ್ಪೊರೇಷನ್ ಕಾಯ್ದೆಯನ್ನು ಅಂಗೀಕರಿಸಿತು ಮತ್ತು ಕಂಪನಿಯ ಸ್ಥಾಪಕ ಜೆಆರ್ ಡಿ ಟಾಟಾ ಅವರಿಂದ ಮಾಲೀಕತ್ವದ ಹಕ್ಕುಗಳನ್ನು ಖರೀದಿಸಿತು. ನಂತರ ಈ ಕಂಪನಿಯನ್ನು ಏರ್ ಇಂಡಿಯಾ ಇಂಟರ್ ನ್ಯಾಷನಲ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಯಿತು. ಹೀಗಾಗಿ ಟಾಟಾ ಗ್ರೂಪ್ 68 ವರ್ಷಗಳ ನಂತರ ಮತ್ತೊಮ್ಮೆ ತನ್ನ ಸ್ವಂತ ಕಂಪನಿಯನ್ನು ಹಿಂತೆಗೆದುಕೊಂಡಂತಾಗಿದೆ

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.

ರಾಜಕೀಯ

ನಿತೀಶ್‌ ಕುಮಾರ್‌ ಪ್ರಧಾನಿಯಾಗುವ ಭ್ರಮೆಯಲ್ಲಿದ್ದಾರೆ, ಅದಕ್ಕಾಗಿ ವಿಪಕ್ಷಗಳ ಕೂಟ ಸೇರಿದ್ದಾರೆ : ಬಿಜೆಪಿ

ಇದು ‘ಆಯಾ ರಾಮ್, ಗಯಾ ರಾಮ್ʼ ಕಾಯಿಲೆಗೆ ಉದಾಹರಣೆ. ಹಡಗು ಜಿಗಿದು ದಾಖಲೆ ನಿರ್ಮಿಸಿದ್ದಾರೆ. ಅವರು ಉನ್ನತ ಕುರ್ಚಿಗೆ ಹಾತೊರೆಯುತ್ತಿದ್ದಾರೆ.