ಹನೂರು, ಡಿ. 19: ಆಕಸ್ಮಿಕವಾಗಿ ಬಾವಿಯೊಂದರಲ್ಲಿ ಬಿದ್ದಿದ್ದ ವ್ಯಕ್ತಿಗಳಿಬ್ಬರನ್ನು ಹನೂರು ಅಗ್ನಿಶಾಮಕ ಠಾಣೆ ಸಿಬ್ಬಂದಿ ರಕ್ಷಿಸಿದ್ದಾರೆ.
ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣ ಸಮೀಪದಲ್ಲಿರುವ ತೋಟವೊಂದರಲ್ಲಿರುವ ಬಾವಿಯಲ್ಲಿ ವ್ಯಕ್ತಿಗಳಿಬ್ಬರು ಆಕಸ್ಮಿಕವಾಗಿ ಬಿದ್ದಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಹನೂರು ಅಗ್ನಿಶಾಮಕ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಕಾರ್ಯಾಚರಣೆ ನಡೆಸಿದರು.
ಹನೂರು ಪಟ್ಟಣದ ಹೊಸ ಬಡಾವಣೆಯ ದೊರೆಸ್ವಾಮಿ (21), ಕುಮಾರ (60) ಅವರನ್ನು ಸುಮಾರು 70 ಅಡಿ ಅಳ ಹಾಗೂ 30 ಅಡಿ ಕೊಳಚೆ ನೀರು ತುಂಬಿದ್ದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದರು. ಇವರನ್ನು ಹಗ್ಗದ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆ ಎತ್ತಿ ರಕ್ಷಿಸಿದ್ದಾರೆ. ನಂತರ 108 ಆಂಬ್ಯುಲೆನ್ಸ್ ಮೂಲಕ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಯಿತು.