ಬಿಜೆಪಿ ಪಕ್ಷದಿಂದ ಕೊರೊನಾ ವಿತರಣೆ – ಅಖಿಲೇಶ್ ಯಾದವ್!

ಲಕ್ನೋ ಜ 29: ಬಿಜೆಪಿಯವರು ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ಜೊತೆಗೆ ಕೊರೊನಾವನ್ನು ಹಂಚುತಿದ್ದಾರೆ ಎಂದು ಸಮಾಜವಾದಿ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕರು ಲಾಲಾರಸವನ್ನು ಸ್ಪರ್ಶಿಸಿ ಜನರಿಗೆ ಕರಪತ್ರಗಳನ್ನು ಹಂಚುತ್ತಿದ್ದು, ಕೊರೊನಾ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾಸ್ಕ್ ಧರಿಸದೆ ಕರಪತ್ರಗಳನ್ನು ಹಂಚುವ ಮೂಲಕ ರೋಗವನ್ನು ಹರಡುತ್ತಿದ್ದಾರೆ. ಕೋವಿಡ್ ನಿಯಮವನ್ನು ಪಾಲಿಸದೇ ಇರುವವರ ವಿರುದ್ಧ ಚುನಾವಣಾ ಆಯೋಗ ತಡೆಯಾಜ್ಞೆ ಹೊರಡಿಸಬೇಕು ಎಂದು ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.


ಯುಪಿಯ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ಮನೆ ಮನೆಗೆ ತೆರಳಿ ಲಾಲಾರಸವನ್ನು ಸ್ಪರ್ಶಿಸಿ ಕರಪತ್ರಗಳನ್ನು ಸ್ಪರ್ಶಿಸಿ ಕರಪತ್ರಗಳನ್ನು ವಿತರಿಸುತ್ತಿರುವ ವೀಡಿಯೊವನ್ನು ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದರು.

ಹೀಗಾಗಿ ಬಿಜೆಪಿಯ ಚುನಾವಣಾ ಅಭಿಯಾನದ ವಿರುದ್ಧ ಆರೋಪಗಳು ಕೇಳಿಬಂದಿದೆ ಎಂದರು. ಜೊತೆಗೆ ಈ ಬಾರಿ ಬಿಜೆಪಿ ಉತ್ತರ ಪ್ರದೇಶದಿಂದ ಪಲಾಯನ ಮಾಡಲಿದೆ. ಅಧಿಕಾರಕ್ಕೆ ಬಂದ ನಂತರ 15 ದಿನಗಳಲ್ಲಿ ಕಬ್ಬು ರೈತರಿಗೆ ಹಣ ಒದಗಿಸಲಾಗುವುದು ಎಂದು ಅಖಿಲೇಶ್ ಯಾದವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕೊರೊನಾ ನಿಯಮಗಳನ್ನುಪಾಲಿಸದೆ ಬಿಜೆಪಿ ಪ್ರಚಾರ ನಡೆಸುತ್ತಿರುವ ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಧ್ಯಪ್ರವೇಶಿಸಿ ಅವರಿಗೆ ಸರಿಯಾದ ಶಿಕ್ಷೆ ವಿಧಿಸಬೇಕೆಂದು ಅಖಿಲೇಶ್ ಯಾದವ್ ಆಗ್ರಹಿಸಿದ್ದಾರೆ.


ಫೆಬ್ರವರಿ 10ರಿಂದ ಚುನಾವಣೆ :
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ತೀರ್ಪು ಹೊರಬೀಳಲಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

Exit mobile version