ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ನಿಧನ

ಮುಂಬೈ ಸೆ 08 : ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಇಂದು ಇಹಲೋಕವನ್ನು ತ್ಯೆಜಿಸಿದ್ದಾರೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನಲೆಯಲ್ಲಿ ಸೆಪ್ಟೆಂಬರ್ 3ರಂದು ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಆರೋಗ್ಯ ಸ್ಥಿತಿಯಲ್ಲಿದ್ದ ಅವರಿಗೆ ಆಸ್ಪತ್ರೆಯ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರುಣಾ ಭಾಟಿಯಾ (77) ಇಂದು ಅಸುನೀಗಿದ್ದಾರೆ.  

ಈ ವಿಷಯವನ್ನು ಸ್ವತಃ ನಟ ಅಕ್ಷಯ್ ಕುಮಾರ್ ಅವರೇ ಖಚಿತಪಡಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ತಾಯಿಯೇ ನನ್ನ ಮೂಲ ಇಂದು ನಾನು ನನ್ನ ಅಸ್ತಿತ್ವದ ಮೂಲದಲ್ಲಿ ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಶ್ರೀಮತಿ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬವು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ ಎಂದು ಭಾವುಕರಾಗಿ ಟ್ವೀಟ್‌ ಮಾಡಿದ್ದಾರೆ.

Exit mobile version