ಪರೀಕ್ಷೆ ಇಲ್ಲದೇ ಎಲ್ಲರೂ ಪಾಸ್‌: ದ್ವಿತೀಯ ಪಿಯುಸಿ ರಿಪೀಟರ್ಸ್‌ಗೆ ಸಿಹಿಸುದ್ದಿ

ಬೆಂಗಳೂರು, ಜು. 05: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪುನರಾವರ್ತಿತ (ರಿಪೀಟರ್ಸ್‌) ಅಭ್ಯರ್ಥಿಗಳನ್ನೂ ಪರೀಕ್ಷೆ ಇಲ್ಲದೇ ಪಾಸ್‌ ಮಾಡುವುದಾಗಿ ಹೈಕೋರ್ಟ್‌ಗೆ ಸರ್ಕಾರ ತಿಳಿಸಿದೆ.

ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಮಾಹಿತಿ ನೀಡಿದೆ.
ರಿಪೀಟರ್ಸ್‌ಗೆ ಶೇ. 35ರಷ್ಟು ಅಂಕ ನೀಡಲು ಸರ್ಕಾರ ನಿರ್ಧರಿಸಿದೆ. ಈ ಸಾಲಿನಲ್ಲಿ 76 ಸಾವಿರ ಪುನರಾವರ್ತಿತ ಅಭ್ಯರ್ಥಿಗಳಿದ್ದಾರೆ ಎನ್ನಲಾಗಿದೆ.

ಕೋವಿಡ್‌ನಿಂದಾಗಿ ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿತ್ತು. ರೆಗ್ಯೂಲರ್‌ ವಿದ್ಯಾರ್ಥಿಗಳನ್ನು ಅವರ ಪ್ರಥಮ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂಕಗಳ ಆಧಾರದಲ್ಲಿ ತೇರ್ಗಡೆ ಮಾಡಲಾಗಿದೆ.

Exit mobile version