Visit Channel

ಪಂಜಾಬ್‌ನಲ್ಲಿ ಗರಿಗೆದರಿದ ರಾಜಕೀಯ, ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ನವದೆಹಲಿ ಸೆ 30 : ಹಲವು ದಿನಗಳಿಂದ ಪಂಜಾಬ್‌ನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 2 ದಿನಗಳ ಹಿಂದೆಯಷ್ಟೇ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇವರ ಭೇಟಿ ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಸೆಪ್ಟೆಂಬರ್ 18 ರಂದು ಅಮರಿಂದರ್ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚರಣ್ ಜಿತ್ ಸಿಂಗ್ ಛನ್ನಿ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೂತನ ಸಚಿವ ಸಂಪುಟ ಸಹ ರಚನೆಯಾಗಿದೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎನ್ನುವಷ್ಟರಲ್ಲೇ ಸಿಧು ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ನಿನ್ನೆಯೇ ಅಮರಿಂದರ್ ಸಿಂಗ್ ಅವರು ದೆಹಲಿಗೆ ಆಗಮಿಸಿದ್ದರು.

ಅಮಿತ್‌ ಶಾ ಅವರನ್ನು ಭೇಟಿ ಮಾಡಿರುವ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಕಾಂಗ್ರೆಸ್ ನ ತಳಮಳ ಮತ್ತಷ್ಟು ಹೆಚ್ಚಾಗಿದೆ. ಅಮರಿಂದರ್ ಸಿಂಗ್ ಅವರು ಒಂದು ವೇಳೆ ಬಿಜೆಪಿಗೆ ಸೇರ್ಪಡೆಯಾಗಿದ್ದೇ ಆದಲ್ಲಿ, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಪ್ರಮಾಣದಲ್ಲಿ ಲಾಭವಾಗಲಿದೆ ಎಂದು ಅಂದಾಜಿಸಲಾಗಿದೆ. ಅಮರಿಂದರ್ ಸಿಂಗ್ ಅವರ ದೆಹಲಿ ಭೇಟಿ ಕುರಿತು ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಅವರು ಟ್ವೀಟ್ ಮಾಡಿ ‘ಅಮರಿಂದರ್ ಸಿಂಗ್ ಅವರು ವೈಯಕ್ತಿಕ ಕಾರಣಗಳಿಂದಾಗಿ ದೆಹಲಿಗೆ ಅಗಮಿಸಿದ್ದಾರೆ. ಈ ವೇಳೆ ಅವರು ಕೆಲವು ಮಿತ್ರರನ್ನು ಭೇಟಿ ಮಾಡಲಿದ್ದಾರೆ ಜೊತೆಗೆ ದೆಹಲಿಯಲ್ಲಿರುವ ಪಂಜಾಬ್ ಸಿಎಂ ನಿವಾಸವನ್ನು ಖಾಲಿ ಮಾಡಲಿದ್ದಾರೆ. ಈ ಭೇಟಿಯ ಕುರಿತು ಯಾವುದೇ ಊಹಾಪೋಹಗಳಿಗೆ ಅವಕಾಶವಿಲ್ಲ’ ಎಂದು ತಿಳಿಸಿದ್ದಾರೆ.

Latest News

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.