ರಾಜ್ಯ ಸರ್ಕಾರದ ಕಾರ್ಯ ವೈಖರಿಗೆ ಅಮಿತ್‌ ಶಾ ಅಸಮಾಧಾನ, ಸಿಎಂಗೆ ಪುಲ್‌ಕ್ಲಾಸ್‌!

BJP

ಬೆಂಗಳೂರು : ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ನಾಯಕ(BJP Leader) ಅಮಿತ್‌ ಶಾ(Amit Shah), ರಾಜ್ಯ ಸರ್ಕಾರದ ಕಾರ್ಯ ವೈಖರಿಯ ಕುರಿತು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಗೃಹ ಸಚಿವ(Home Minister) ಆರಗ ಜ್ಞಾನೇಂದ್ರ(Araga Jnanendra) ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೆ ಪುಲ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರದ ಕಾರ್ಯ ವೈಖರಿಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲವನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ದಿಢೀರ್ ಭೇಟಿ ನೀಡಿರುವ ಅಮಿತ್‌ ಶಾ, ಚುನಾವಣೆ ಸಮೀಪಿಸುತ್ತಿರುವಾಗ ಈ ರೀತಿಯ ಘಟನೆಗಳಿಗೆ ಆಸ್ಪದ ನೀಡದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು.

ನಮ್ಮ ಕಾರ್ಯಕರ್ತರೇ ನಮ್ಮ ಪಕ್ಷದ ವಿರುದ್ದ ತಿರುಗಿ ಬೀಳುವಂತ ಪರಿಸ್ಥಿತಿ ನಿರ್ಮಾಣವಾಗಿರುವುದು ನಿಮ್ಮ ವೈಫಲ್ಯವನ್ನು ತೋರಿಸುತ್ತದೆ. ಬಿಜೆಪಿ ಕಾರ್ಯಕರ್ತರ(BJP Workers) ಪಕ್ಷವಾಗಿದ್ದು, ನಮ್ಮ ಕಾರ್ಯಕರ್ತರಿಗೆ ನಾವೂ ಬೆಂಬಲವಾಗಿ ನಿಲ್ಲಬೇಕು. ಪ್ರತಿ ಜಿಲ್ಲೆಗೂ ಭೇಟಿ ನೀಡಿ, ರಾಜೀನಾಮೆ(Resign) ನೀಡಿರುವ ಕಾರ್ಯಕರ್ತರನ್ನು ಸಮಾಧಾನ ಪಡಿಸಿ, ಮುಂಬರುವ ಚುನಾವಣೆಗೆ ತಯಾರಿ ನಡೆಸುವಂತೆ ಸೂಚನೆ ನೀಡಿ. ಈ ಕಾರ್ಯ ಸಾಧ್ಯವಾದಷ್ಟು ಬೇಗ ನಡೆಯಬೇಕು.

ಪಕ್ಷವನ್ನು ಸಂಘಟಿಸುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡಿ, ಕಾರ್ಯಕರ್ತರನ್ನು ಒಗ್ಗೂಡಿಸಿ ಎಂದು ರಾಜ್ಯ ಬಿಜೆಪಿ(State BJP) ನಾಯಕರಿಗೆ ಖಡಕ್‌ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನಮ್ಮ ಕಾರ್ಯಕರ್ತರ ಸರಣಿ ಹತ್ಯೆಗಳಾಗುತ್ತಿದ್ದರು, ನೀವು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಎಡವಿದ್ದೀರಿ. ವಿಪಕ್ಷಗಳು ಇದರ ಲಾಭ ಪಡೆದುಕೊಳ್ಳುತ್ತಿವೆ. ಚುನಾವಣೆ ವರ್ಷದಲ್ಲಿ ಈ ರೀತಿಯ ಘಟನೆಗಳು ನಡೆದರೆ, ಅದರಿಂದ ಪಕ್ಷಕ್ಕೆ ಭಾರೀ ನಷ್ಟ ಉಂಟಾಗಲಿದೆ. ಹೀಗಾಗಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಿ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ತಯಾರಿ ನಡೆಸಿ,

ವಿಧಾನಸಭಾ ಕ್ಷೇತ್ರವಾರು ಪಕ್ಷವನ್ನು ಬಲಪಡಿಸುವ ಸಂಬಂಧ ರೂಪರೇಷಗಳನ್ನು ಸಿದ್ದಪಡಿಸಿಕೊಂಡು ದೆಹಲಿ ಬರುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಅಮಿತ್‌ ಶಾ ದಿಢೀರ್‌ ಭೇಟಿಯಿಂದ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರಗ ಜ್ಞಾನೇಂದ್ರ ಅವರ ಕಾರ್ಯ ವೈಖರಿ ಅಮಿತ್‌ ಶಾ ಅಸಮಾಧಾನಕ್ಕೆ ಮುಖ್ಯಕಾರಣ ಎನ್ನಲಾಗಿದೆ.

Exit mobile version