ನವದೆಹಲಿ, ಜ. 28: ಗಣರಾಜ್ಯೋತ್ಸವ ದಿನದಂದು ಕೆಂಪು ಕೋಟೆಯಲ್ಲಿ ರೈತ ಸಂಘಟನೆಗಳು ನಡೆಸಿದ ಕಿಸಾನ್ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಪ್ರತಿಭಟನಾಕಾರರಿಂದ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿರುವ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಲು ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ. ಮಂಗಳವಾರ ನಡೆದ ಹಿಂಸಾಚಾರದಲ್ಲಿ ಕನಿಷ್ಠ 394 ಮಂದಿ ಪೊಲೀಸರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಶಾ ಅವರು ಗುರುವಾರ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಶುಶ್ರುತ್ ಟ್ರಾಮಾ ಸೆಂಟರ್ ಮತ್ತು ತೀರ್ಥ ರಾಮ್ ಆಸ್ಪತ್ರೆಗೆ ಭೇಟಿ ನೀಡಿ ಪೋಲೀಸರ ಅರೋಗ್ಯ ವನ್ನು ವಿಚಾರಿಸಿದರು.
ಹಿಂಸಾಚಾರ ಸಂಬಂಧ ನಿನ್ನೆಯಷ್ಟೇ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಪರಿಶೀಲನಾ ಸಭೆ ನಡೆಸಲಾಗಿದ್ದು, ಸಬೆಯಲ್ಲಿ ಎಫ್‌ಐಆರ್ ನಲ್ಲಿ ಹೆಸರು ದಾಖಲಾದ ಸುಮಾರು 25 ರೈತ ಮುಖಂಡರಿಗೆ ಲುಕ್ ಔಟ್ ನೋಟಿಸ್ ನೀಡಲು ದೆಹಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.