Jammu Kashmir : ಸದ್ಯ ಕಣಿವೆರಾಜ್ಯ ಜಮ್ಮು ಕಾಶ್ಮೀರದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು, ಕಾಶ್ಮೀರದ ಬಾರಾಮುಲ್ಲಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ,
ಸಮೀಪದ ಮಸೀದಿಯಿಂದ (Mosque) ಆಜಾನ್ (Azaan) ಕೇಳಿ ಬರುತ್ತಿದ್ದಂತೆ ತಮ್ಮ ಭಾಷಣವನ್ನು ನಿಲ್ಲಿಸಿ, ಗೌರವ ಸೂಚಿಸಿದ ವಿಡಿಯೋ ಇದೀಗ ಎಲ್ಲೆಡೆ ವೈರಲ್(Viral) ಆಗಿದೆ.

ಬಾರಾಮುಲ್ಲಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ವೇಳೆ, (Amit shah speech video goes viral) ಸಮೀಪದ ಮಸೀದಿಯಿಂದ ಶಬ್ದ ಕೇಳಿಬಂದಿತು.
ಆಗ ಗೃಹ ಸಚಿವರು ಮಸೀದಿಯಲ್ಲಿ ಏನಾದರೂ ನಡೆಯುತ್ತಿದೆಯೇ ಎಂದು ಭದ್ರತಾ ಸಿಬ್ಬಂದಿಯನ್ನು ಕೇಳಿದರು. ಮಸೀದಿಯಲ್ಲಿ ಅಜಾನ್ (ಪ್ರಾರ್ಥನೆ) ನಡೆಯುತ್ತಿದೆ ಎಂದು ತಿಳಿಯುತ್ತಿದ್ದಂತೆ,
ಸಭಿಕರ ಅನುಮತಿಯೊಂದಿಗೆ ಭಾಷಣವನ್ನು ನಿಲ್ಲಿಸಿದರು. ಆಜಾನ್ ಪೂರ್ಣಗೊಂಡ (Amit shah speech video goes viral) ನಂತರ ಮತ್ತೆ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಗೃಹ ಸಚಿವರ ಈ ನಡೆ ಇದೀಗ ಭಾರೀ ಮೆಚ್ಚಗೆಗೆ ಪಾತ್ರವಾಗಿದೆ.
ಇನ್ನು ಕಾಶ್ಮೀರ ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್ಶಾ ಅವರು, ಭಯೋತ್ಪಾದನೆಯನ್ನು ಪೋಷಿಸುವ ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆಯನ್ನು ನಾವು ನಡೆಸುವುದಿಲ್ಲ.
ಇದನ್ನೂ ಓದಿ : https://vijayatimes.com/rahkeem-cornwall-creates-history/
ಅಂತಹ ಯಾವುದೇ ಆಲೋಚನೆ ನಮ್ಮ ಮುಂದಿಲ್ಲ. 70 ವರ್ಷಗಳ ಕಾಲ ಆಡಳಿತ ನಡೆಸಿದವರು ಪಾಕಿಸ್ತಾನದೊಂದಿಗೆ ಮಾತನಾಡು ಎನ್ನುತ್ತಿದ್ದಾರೆ. ನಾವೇಕೆ ಪಾಕಿಸ್ತಾನದೊಂದಿಗೆ ಮಾತನಾಡಬೇಕು? ನಾವು ಮಾತನಾಡುವುದಿಲ್ಲ. https://youtu.be/cXz8A52dSZs
ನಾವು ಬಾರಾಮುಲ್ಲಾದ ಜನರೊಂದಿಗೆ ಮಾತನಾಡುತ್ತೇವೆ, ನಾವು ಕಾಶ್ಮೀರದ ಜನರೊಂದಿಗೆ ಮಾತನಾಡುತ್ತೇವೆ ಎಂದರು.

ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ತೊಡೆದುಹಾಕಲು ಪ್ರತಿಜ್ಞೆ ಮಾಡಿದ ಅವರು, 1990ರ ದಶಕದಿಂದೀಚೆಗೆ ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆ 42,000 ಜನರನ್ನು ಬಲಿ ತೆಗೆದುಕೊಂಡಿದೆ. ಭಯೋತ್ಪಾದನೆಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಸಾಕಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ.
ಇದನ್ನೂ ಓದಿ : https://vijayatimes.com/india-faces-south-africa-in-first-odi/
ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪಿಸುವುದು ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು. ಮೂರು ದಿನಗಳ ಕಾಶ್ಮೀರ ಪ್ರವಾಸದಲ್ಲಿರುವ ಗೃಹ ಸಚಿವರು, ಉನ್ನತ ಅಧಿಕಾರಿಗಳೊಂದಿಗೆ ಭದ್ರತಾ ವ್ಯವಸ್ಥೆಯ ಕುರಿತು ಚರ್ಚೆ ನಡೆಸಿದರು.
- ಮಹೇಶ್.ಪಿ.ಎಚ್