Bihar : 2024ರ ಲೋಕಸಭೆ ಚುನಾವಣೆಯಲ್ಲಿ(Amit shah targets bihar) ಬಿಹಾರದ 40 ಸ್ಥಾನಗಳಲ್ಲಿ 32 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಭಾರತೀಯ ಜನತಾ ಪಕ್ಷ(BJP) ಹೊಂದಿದೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆ ಮುಗಿದ ತಕ್ಷಣ ರಾಜ್ಯದಲ್ಲಿ 2025ರ(Amit shah targets bihar) ವಿಧಾನಸಭಾ ಚುನಾವಣೆಗೆ ಪಕ್ಷವು ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಶುಕ್ರವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nithish Kumar) ಅವರನ್ನು ಖಂಡಿಸಿದ ಒಂದು ದಿನದ ಬಳಿಕ ಬಿಹಾರ ಮುಖ್ಯಮಂತ್ರಿ ಬಿಜೆಪಿಯ ಬೆನ್ನಿಗೆ ಚೂರಿ ಹಾಕಿದ್ದಾರೆ
ಮತ್ತು ಕಾಂಗ್ರೆಸ್(Congress) ಮತ್ತು ಆರ್ಜೆಡಿ(RJD) ಸೇರಿ ಲಾಲು ತೊಡೆಯ ಮೇಲೆ ಮಲಗುವ ಕೆಲಸ ಮಾಡಿದ್ದಾರೆ ಎಂದು ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ https://vijayatimes.com/sonia-gandhi-will-join-bharat-jodo-yatra/
ನಿತೀಶ್ ಕುಮಾರ್ ಪ್ರಧಾನಿಯಾಗುವ ಆಸೆಯನ್ನು ಕನಸಿನಲ್ಲಿ ಕಾಣುತ್ತಿದ್ದಾರೆ ಎಂದು ಆರೋಪಿಸಿದರು. ಬಿಹಾರದ ಪೂರ್ಣಿಯಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ,
2024ರ ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಮತ್ತು ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಜೋಡಿ ಅಳಿಸಲಾಗುವುದು ಮತ್ತು ಒಂದು ವರ್ಷದ ನಂತರ ಬಿಜೆಪಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದಿಂದ ಬಹುಮತ ಗಳಿಸಲಿದೆ ಎಂದು ಘಟುಧ್ವನಿಯಲ್ಲಿ ಹೇಳಿದರು.
