Bengaluru: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ (Amit Shah Visit Karnataka) ಚಾಣಕ್ಯ ಎಂದೇ ಖ್ಯಾತಿ ಪಡೆದಿರುವ ಅಮಿತ್ ಶಾ ಫೆ.10 ರಂದು ಕರ್ನಾಟಕಕ್ಕೆ
ಭೇಟಿ ನೀಡಲಿದ್ದು ಮುಂಬರುವ ಲೋಕಸಭೆ ಚುನಾವಣೆಯ ಸಿದ್ಧತೆ ಕುರಿತು ರಾಜ್ಯ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.ಅಮಿತ್ ಶಾ ಅವರು ಪಕ್ಷದ ಲೋಕಸಭೆ ಕ್ಲಸ್ಟರ್
ಸಭೆಯನ್ನು ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y Vijayendra) ಅವರು ತಿಳಿಸಿದ್ದಾರೆ.
ಫೆ.10 ರಂದು ಅಮಿತ್ ಶಾ (Amit Shah) ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದರ ಜೊತೆಗೆ ರಾಜ್ಯ ಬಿಜೆಪಿ ನಾಯಕರ ಜೊತೆಗೂ ಮಹತ್ವದ ಸಭೆಗಳನ್ನು ನಡೆಸಲಿದ್ದಾರೆ.
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಮಿತ್ ಶಾ ಭೇಟಿ ಮಹತ್ವ ಪಡೆದುಕೊಂಡಿದ್ದು, ಟಿಕೆಟ್ ವಿಚಾರವಾಗಿ ಸೃಷ್ಟಿಯಾಗಿರುವ ಗೊಂದಲದ ಹಿನ್ನೆಲೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಇನ್ನು ಬಿಜೆಪಿ ಹಾಗೂ ಜೆಡಿಎಸ್ (JDS) ನಡುವೆ ಮೈತ್ರಿಯಾದರೂ ರಾಜ್ಯದ ಕೆಲವು ನಾಯಕರಿಗೆ ಅಸಮಾಧಾನವಿದೆ. ಮೈತ್ರಿಯ ಲಾಭ ನಷ್ಟದ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.
ಅದರಲ್ಲೂ ಎಷ್ಟು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಬೇಕು ಹಾಗೂ ಯಾವ್ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗಿಲ್ಲ. ಅಮಿತ್ ಶಾ
ಜೊತೆಗಿನ ಸಭೆಯಲ್ಲಿ ಈ ಬಗ್ಗೆಯೂ ಚರ್ಚೆ (Amit Shah Visit Karnataka) ನಡೆಸುವ ಸಾಧ್ಯತೆ ಇದೆ.
ಎಲ್ಲರೊಂದಿಗೆ ಚರ್ಚಿಸಿ ಸೀಟು (Seat) ಹಂಚಿಕೆ ಮಾಡಲಾಗುವುದು. ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಪರಿಗಣಿಸಲಾಗುತ್ತದೆ ಎಂದು
ವಿಜಯೇಂದ್ರ ತಿಳಿಸಿದ್ದಾರೆ.