ಅಮಿತ್ ಶಾ ಅವರೇ, ಬಾಬಾ ಸಾಹೇಬ್ ಅಂಬೇಡ್ಕರರು ಬರೆದಿರುವ ಸಂವಿಧಾನವನ್ನು ಓದಿ : ಸಿದ್ದರಾಮಯ್ಯ

Bengaluru : ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಅವರ ಭಾಷಣವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿದ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Amit Shah Vs Siddaramaiah) ಅವರು ಸರಣಿ ಪ್ರಶ್ನೆಗಳ ಮುಖೇನ ರಾಜ್ಯ ಬಿಜೆಪಿ (State bjp) ಹಾಗೂ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ಅಂತಿಮವಾಗಿ ಮತದಾರರು ತಮ್ಮ ಆಯ್ಕೆಯನ್ನು ತಾವೇ ನಿರ್ಧರಿಸುತ್ತಾರೆ. ವಾರೆ ವ್ಹಾ ಅಮಿತ್ ಶಾ ಜೀ,

ಇದು ಕರ್ನಾಟಕದ ಭವಿಷ್ಯವನ್ನು ನರೇಂದ್ರ ಮೋದಿ ಅವರ ಕೈಯಲ್ಲಿ ಕೊಡುವ ಚುನಾವಣೆ ಎಂಬ ಸತ್ಯವನ್ನೇ ಹೇಳಿದ್ದೀರಿ, ಧನ್ಯವಾದಗಳು. ಕನ್ನಡಿಗರಿಗೆ ಇದೆಂಥಾ ಅವಮಾನ…!!


ಕರ್ನಾಟಕದ (Karnataka) ಭವಿಷ್ಯವನ್ನು ನೋಡಿಕೊಳ್ಳಲು ಒಬ್ಬ ಕನ್ನಡಿಗನೂ ಇಲ್ಲದಷ್ಟು ನಿಮ್ಮ ಭಾರತೀಯ ಜನತಾ ಪಾರ್ಟಿ (Bharatiya Janata Party) ಪಕ್ಷ ದಿವಾಳಿಯಾಗಿದೆಯೇ?

ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಮತದಾರರು ಆಯ್ಕೆ ಮಾಡುವುದು ತಮ್ಮ ಸೇವೆ ಮಾಡುವ ಪ್ರತಿನಿಧಿಗಳನ್ನೆ ಹೊರತು, ದೆಹಲಿ ದೊರೆಯ ಸೇವೆ ಮಾಡುವ ಗುಲಾಮರನ್ನಲ್ಲ.

ಇದನ್ನೂ ಓದಿ : https://vijayatimes.com/airtel-5g-plans/

ಅಮಿತ್ ಶಾ ಅವರೇ, ಪ್ರಜಾಪ್ರಭುತ್ವ ವ್ಯವಸ್ಥೆಗಷ್ಟೇ ಅಲ್ಲ, ಸ್ವಾಭಿಮಾನಿ ಕನ್ನಡಿಗರಿಗೂ ನೀವು ಅವಮಾನ ಮಾಡಿದ್ದೀರಿ.

ಗೃಹಸಚಿವ ಅಮಿತ್ ಶಾ ಅವರೇ, ನಮ್ಮ ಬ್ಯಾಂಕುಗಳು, ಬಂದರು, ವಿಮಾನ ನಿಲ್ದಾಣಗಳನ್ನು ಗುಜರಾತಿ ವ್ಯಾಪಾರಿಗಳಿಗೆ ಮಾರಿಬಿಟ್ಟಿರಿ,

ನಮ್ಮ ಹೆಮ್ಮೆಯ ನಂದಿನಿಯನ್ನೂ ಕಬಳಿಸಲು ಹೊಂಚು ಹಾಕುತ್ತಿದ್ದೀರಿ.

ಈಗ ಇಡೀ ಕರ್ನಾಟಕವನ್ನೇ ಖರೀದಿಸಲು ಹೊರಟಿದ್ದೀರಾ? ನಿಮ್ಮ ದುರಾಹಂಕಾರದ ಮಾತುಗಳಿಗೆ ರಾಜ್ಯದ (Amit Shah Vs Siddaramaiah) ಸ್ವಾಭಿಮಾನಿ ಕನ್ನಡಿಗರು ಚುನಾವಣೆಯಲ್ಲಿಯೇ ಉತ್ತರ ನೀಡಲಿದ್ದಾರೆ,

ಕಾದುನೋಡಿ. ಮಾನ್ಯ ಅಮಿತ್ ಶಾ ಅವರೇ ಗೋಲ್ವಾಲ್ಕರ್ ಅವರ ‘ಬಂಚ್ ಆಫ್ ಥಾಟ್ಸ್’ ಓದಿದದರಷ್ಟೇ ಸಾಲದು,

ಬಾಬಾ ಸಾಹೇಬ್ ಅಂಬೇಡ್ಕರರು ಬರೆದಿರುವ ಸಂವಿಧಾನವನ್ನೂ ಪುರುಸೊತ್ತು ಮಾಡಿಕೊಂಡು ಓದಿ.

ದೆಹಲಿಯಲ್ಲಿ ಕೂತು ರಾಜ್ಯವನ್ನು ಆಳಲು ಇದು ರಾಜಪ್ರಭುತ್ವ ಅಲ್ಲ, ಇದು ಪ್ರಜಾಪ್ರಭುತ್ವ. ತಿಳಿದಿರಲಿ. ಕನ್ನಡದ ಕತ್ತು ಹಿಚುಕಿ ಹಿಂದಿ ಹೇರುವ ನಿಮ್ಮ ಕಟುಕತನ,

ನಮ್ಮ ಹಿರೀಕರು ಕಟ್ಟಿ ಬೆಳೆಸಿದ ಸಂಪತ್ತನ್ನು ಕಬಳಿಸುವ ನಿಮ್ಮ ವ್ಯಾಪಾರಿ ಬುದ್ದಿ ಮತ್ತು ಇಲ್ಲಿನ ರಾಜಕೀಯ ನಾಯಕತ್ವವನ್ನೇ ನಾಶ ಮಾಡಿ

ನಮ್ಮ ಮೇಲೆ ಸವಾರಿ ಮಾಡುವ ನಿಮ್ಮ ಸರ್ವಾಧಿಕಾರಿ ಧೋರಣೆಯನ್ನು ಕನ್ನಡಿಗರು ಈಗ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಅಮಿತ್ ಶಾ ಅವರೇ..

ರಾಜ್ಯದ ಬಿಜೆಪಿ ನಾಯಕರು ನಿಮ್ಮ ಅಜ್ಞೆಗೆ ಗೋಣು ಆಡಿಸುವ ಗುಲಾಮರಾಗಿರಬಹುದು, ಆದರೆ ನೆಲ, ಜಲ,

ಭಾಷೆಯ ರಕ್ಷಣೆ ಮತ್ತು ಕನ್ನಡತನದ ಅಸ್ಮಿತೆಯ ಪ್ರಶ್ನೆ ಎದುರಾದಾಗ ನಮ್ಮ ಸ್ವಾಭಿಮಾನಿ ಕನ್ನಡಿಗರು ಜಾತಿ, ಧರ್ಮ, ಪಕ್ಷ, ಪಂಥ ಬಿಟ್ಟು

ಬೀದಿಗೆ ಇಳಿದು ರಕ್ಷಿಸಿಕೊಳ್ಳುತ್ತಾರೆ. ಕನ್ನಡಿಗರನ್ನು ಕೆಣಕಿದ್ದೀರಿ, ಅನುಭವಿಸುತ್ತೀರಾ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ : https://vijayatimes.com/protection-of-chetan-from-deportation/

ಇನ್ನು ಮುಸ್ಲಿಂ ಮೀಸಲಾತಿ (Muslim reservation) ಹಂಚಿಕೆ ವಿಚಾರವನ್ನು ಕೆದಕಿದ ಸಿದ್ದರಾಮಯ್ಯನವರು,

ಮುಸ್ಲಿಂ ಮೀಸಲಾತಿ ರದ್ದತಿಗೆ ತಡೆಯಾಜ್ಞೆ ನೀಡಿರುವುದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ಮಾಡಿರುವ

ಕಪಾಳ‌ಮೋಕ್ಷವಾಗಿದೆ. ಈ ತಡೆಯಾಜ್ಞೆ ತಾತ್ಕಾಲಿಕವಾಗಿದ್ದರೂ ಇದೇ ಖಾಯಂ‌ ಆದೇಶ ಆಗುವುದು ಖಂಡಿತ.

ಭಾರತೀಯ ಜನತಾ ಪಕ್ಷ ಪ್ರಕಟಿಸಿರುವ‌ ಪರಿಷ್ಕೃತ ಮೀಸಲಾತಿ ನೀತಿಯಲ್ಲಿ ಮುಸ್ಲಿಂಮರ ವಿರುದ್ಧದ ದ್ವೇಷದ ರಾಜಕೀಯ ದುರುದ್ದೇಶ ಇತ್ತೇ ಹೊರತು,

ಪ್ರಾಮಾಣಿಕತೆ ಇರಲಿಲ್ಲ. ಯಾವುದೇ ಸಮೀಕ್ಷೆ- ಅಂಕಿ ಅಂಶದ ಆಧಾರವಿಲ್ಲದ ಈ ಮೀಸಲಾತಿ ಸಹಜ ಸಾವಿಗೀಡಾಗುವುದು ಖಂಡಿತ. ಈಗಲೂ ಕಾಲ ಮಿಂಚಿಲ್ಲ.

ಇದನ್ನೂ ಓದಿ : https://vijayatimes.com/lic-premium-collection-this-year/

ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮುಸ್ಲಿಂ ಮೀಸಲಾತಿ ರದ್ದತಿಯ ಆದೇಶವನ್ನು ಹಿಂದೆಗೆದುಕೊಂಡು ತನ್ನ ತಪ್ಪನ್ನು ಒಪ್ಪಿಕೊಳ್ಳಬೇಕು.

ಮೀಸಲಾತಿಯನ್ನು ರಾಜಕೀಯದಾಟದ (Politics) ದಾಳವನ್ನಾಗಿ ಮಾಡಬಾರದು.

ವರುಣಾ ಕ್ಷೇತ್ರದಲ್ಲಿ (Varuna Constituency) ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ (V. Somanna) ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದು ವರದಿಯಾಗಿದೆ.

ಇದನ್ನು ನಮ್ಮ‌ ಪಕ್ಷದ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೆ ಅದು ಸರಿ ಅಲ್ಲ.

ಎಲ್ಲ ಅಭ್ಯರ್ಥಿಗಳಿಗೂ ಮುಕ್ತ ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದಕ್ಕೆ ಅಡ್ಡಿ ಪಡಿಸಬಾರದು ಎಂದು ಹೇಳಿದರು.

Exit mobile version