download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ಕಾಮುಕರ ಅಟ್ಟಹಾಸ; ನೆರೆಮನೆಯವನಿಂದ 5ರ ಬಾಲೆ ಮೇಲೆ ರೇಪ್!

ಭೋಪಾಲ್, ಫೆ. 05: ಇಂದಿನ  ದಿನಗಳಲ್ಲಿ  ಜನರು ಪ್ರಾಣಿಗಳಿಗೂ ಕೀಳಾಗಿ ಹೋಗಿದ್ದಾರೆ, ಎಂಬುದಕ್ಕೆ ದಿನ ನಿತ್ಯ ನಡೆಯುವ ಅತ್ಯಾಚಾರಗಳೇ ಸಾಕ್ಷಿ.  ಮಧ್ಯ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮಿತಿ ಮೀರಿದ್ದು, ಈ ಹಿಂದೆ ಆಂಟಿಯನ್ನೇ ಅತ್ಯಾಚಾರ ಮಾಡಿದ್ದ ದುಷ್ಕರ್ಮಿಯೋರ್ವ 4 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದು ಹಾಕಿದ್ದಾನೆ. ಇದೀಗ  ಮತ್ತೊಂದು ಪ್ರಕರಣದಲ್ಲಿ ನೆರೆಮನೆಯಾತ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಎರಡೂ ಪ್ರಕರಣಗಳ ಆರೋಪಿಗಳನ್ನು ಬಂಧಿಸಲಾಗಿದ್ದು, ಸಂತ್ರಸ್ಥ 5 ವರ್ಷದ ಬಾಲಕಿಯನ್ನು ರೇವಾ ಜಿಲ್ಲೆಯ ಸಂಜಯ್ ಗಾಂಧಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಬಾಲಕಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಆಕೆಯ ಸ್ಥಿತಿ ಕುರಿತು ವೈದ್ಯರು ಯಾವುದೇ ಮಾಹಿತಿ ನೀಡಿಲ್ಲ.

ಬಾಲಕಿಯನ್ನು ಅತ್ಯಾಚಾರ ಗೈದ ದುಷ್ಕರ್ಮಿಯನ್ನು 25 ವರ್ಷದ ನೆರೆಮನೆಯಾತ ಎನ್ನಲಾಗಿದೆ. ಖಿರ್ಕಾರಿ ಗ್ರಾಮದ ನಿವಾಸಿಯಾಗಿದ್ದು, ಮೊರೆನಾದ ಸಬಲ್ ಘಡ್ ನಲ್ಲಿ ಈತನನ್ನು ಬಂಧಿಸಲಾಗಿದೆ. ಇದೇ ಆರೋಪಿ 6 ತಿಂಗಳ ಹಿಂದೆ ಇದೇ ಮಗುವಿನ ಸಂಬಂಧಿಕ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ವೆಸಗಿ ಜೈಲು ಪಾಲಾಗಿದ್ದ. ಬಳಿಕ 15 ದಿನಗಳಲ್ಲೇ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಇದೀಗ ಬಾಲಕಿಯ ಮೇಲೆ ತನ್ನ ಪೈಶಾಚಿಕ ಕೃತ್ಯವೆಸಗಿದ್ದಾನೆ.

ಗ್ರಾಮದಲ್ಲಿ ಆಟವಾಡುತ್ತಿದ್ದ ಬಾಲಕಿಯರನ್ನು ಈತ ಚಾಕಲೇಟ್ ಕೊಡಿಸುವುದಾಗಿ ಹೇಳಿ ಮನೆಗೆ ಕರೆದೊಯ್ದಿದ್ದ. ಬಳಿಕ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದ. ಈ ವೇಳೆ ಇಬ್ಬರು ಬಾಲಕಿಯರು ಮನೆಯಿಂದ ತಪ್ಪಿಸಿಕೊಂಡು ಬಂದಿದ್ದರು. ಆದರೆ ಸಂತ್ರಸ್ಥ 5 ವರ್ಷದ ಬಾಲಕಿ ಈತನ ಕಾಮತೃಷೆಗೆ ಬಲಿಯಾಗಿದ್ದಾಳೆ.

.ಈ ಕುರಿತಂತೆ ಮಾಹಿತಿ ನೀಡಿರುವ ಸಬಲ್‌ಗಢ ಪೊಲೀಸ್ ಠಾಣೆಯ ಅಧಿಕಾರಿ ನರೇಂದ್ರ ಶರ್ಮಾ ಅವರು, ಬಂಧಿತ ವ್ಯಕ್ತಿಯ ಮೇಲೆ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಲೈಂಗಿಕ ಅಪರಾಧ ಕಾಯ್ದೆ 2012 ರ ಮಕ್ಕಳ ರಕ್ಷಣೆಯ ನಿಯಮಗಳ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು, ಉಮರಿಯಾ ಜಿಲ್ಲೆಯಲ್ಲಿ 13 ವರ್ಷದ ಬಾಲಕಿಯನ್ನು ಒಂಬತ್ತು ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದರು., ಇನ್ನೂ ಖಂಡ್ವಾ ಜಿಲ್ಲೆಯಲ್ಲೂ 13 ವರ್ಷದ ಬಾಲಕಿಯನ್ನು ಕಿರಾಣಿ ವ್ಯಾಪಾರಿ ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆಮಾಡಿದ್ದ. ಎರಡೂ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article