ಇಂದೇ ಬಿಜೆಪಿ ಸೇರಲಿದ್ದಾರೆ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್!

Bengaluru : ಕನ್ನಡ ಚಿತ್ರರಂಗದ ಎವರ್‌ಗ್ರೀನ್‌ ನಟ ಎಂದೇ ಖ್ಯಾತರಾಗಿರುವ ಹಿರಿಯ ನಟ ಅನಂತ್‌ ನಾಗ್‌ (Anatha Nag)ಅವರು ಮತ್ತೂಮ್ಮೆ ರಾಜಕೀಯ ಅಖಾಡಕ್ಕೆ ಕಾಲಿಡಲಿದ್ದು, ಬಿಜೆಪಿ(BJP) ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ (Anant Nag join BJP) ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ.


ಈ ಹಿಂದೆ ಶಾಸಕ, ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ನಟ, ರಾಜಕಾರಣಿ ಅನಂತ್ ನಾಗ್ ಅವರು, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ (Anant Nag join BJP) ಅನುಭವವನ್ನು ಹೊಂದಿದ್ದಾರೆ.

ಮಾಜಿ ಸಚಿವ ಹಾಗೂ ಕನ್ನಡ ಚಿತ್ರರಂಗದ ಮೇರು ನಟ ಆಗಿರುವ ಅನಂತ್‌ ನಾಗ್‌ ಅವರು ಇದೀಗ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂಬುದು ದೃಢವಾಗಿದೆ.

https://youtu.be/Vlq-2vwci2A

ಇಂದು ಬೆಂಗಳೂರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ (BJP) ಕಛೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ಅವರ ಸಮ್ಮುಖದಲ್ಲಿ ಅನಂತ್‌ ನಾಗ್‌ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

ನಳೀನ್‌ ಕುಮಾರ್‌ ಕಟೀಲ್‌ ಅವರೊಡನೆ ಸಚಿವ ಮುನಿರತ್ನ, ಡಾ‌. ಕೆ ಸುಧಾಕರ್ ಹಾಗೂ ಇತರ ಬಿಜೆಪಿಯ ಪ್ರಮುಖ ನಾಯಕರು ಕಾರ್ಯಕ್ರದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.


2004 ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಸೋಲನ್ನು ಕಂಡಿದ್ದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ರಾಜ್ಯದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖೇನ ಜನರನ್ನು ತಮ್ಮತ್ತ ಸೆಳೆಯುವಲ್ಲಿ ಮುನ್ನುಗ್ಗುತ್ತಿದೆ.

ಈ ಹಿಂದೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah),

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ನಾಯಕರು ಭೇಟಿ ನೀಡುವ ಮೂಲಕ ಭಾರೀ ಪ್ರಚಾರವನ್ನು ನಡೆಸಿದ್ದಾರೆ.

ಮೊನ್ನೆಯಷ್ಟೇ ಜೆ.ಪಿ ನಡ್ಡಾ ಅವರು ಕರಾವಳಿ ಭಾಗವಾದ ಮಂಗಳೂರು, ಉಡುಪಿ, ದಕ್ಷಿಣ ಭಾಗವಾದ ಹಾಸನ,

ಚಿಕ್ಕಮಗಳೂರು ಕಾರ್ಯಕ್ರಮಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾಗಿಯಾಗುವ ಮುಖೇನ ಜನರನ್ನು ಉದ್ದೇಶಿಸಿ ಮಾತನಾಡಿದರು

Exit mobile version