• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹಣ ಸುಲಿಗೆ ಪ್ರಕರಣ: ಕಾಣೆಯಾಗಿದ್ದ ನಿರೂಪಕಿ ದಿವ್ಯಾ ವಸಂತ ಕೇರಳದಲ್ಲಿ ಅರೆಸ್ಟ್!

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಹಣ ಸುಲಿಗೆ ಪ್ರಕರಣ: ಕಾಣೆಯಾಗಿದ್ದ ನಿರೂಪಕಿ ದಿವ್ಯಾ ವಸಂತ ಕೇರಳದಲ್ಲಿ ಅರೆಸ್ಟ್!
0
SHARES
3.7k
VIEWS
Share on FacebookShare on Twitter

Bengaluru: ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದೇಳಿ ವೈರಲ್‌ ಆಗಿ ಬ್ಲ್ಯಾಕ್‌ಮೇಲ್ (Blackmail) ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.

Arrest

ಮಸಾಜ್ ಪಾರ್ಲರ್ ನಲ್ಲಿ ಸ್ಟಿಂಗ್ ಆಪರೇಷನ್ ನೆಪದಲ್ಲಿ ಸುಲಿಗೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಖಾಸಗಿ ಚಾನೆಲ್ ನಲ್ಲಿ ಕೆಲಸ ಮಾಡ್ತಿದ್ದ ರಾಜಾನುಕುಂಟೆ ವೆಂಕಟೇಶ್ ಮತ್ತು ಸಂದೇಶ್ ಎಂಬ ಆರೋಪಿಗಳನ್ನು ಈ ಮುನ್ನ ಬಂಧಿಸಲಾಗಿತ್ತು. ದಿವ್ಯ ವಸಂತ ಮತ್ತು ಗ್ಯಾಂಗ್ (Divya Vasantha And Gang) ನಿಂದ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಯತ್ನ ಪ್ರಕರಣ ಇದಾಗಿದ್ದು, ಈ ಕೇಸ್‌ ನಲ್ಲಿ ತಮ್ಮನ ಬಂಧನ ನಂತರ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯ ತಮಿಳುನಾಡಿನಿಂದ ಕೇರಳ (Kerala)ದಲ್ಲಿ ತಲೆ ಮರೆಸಿಕೊಂಡಿದ್ದಳು. ಸದ್ಯ ಕೇರಳದಿಂದ ಬಂಧಿಸಿ ಕರೆತಂದಿರುವ ಜೀವನ್ ಭೀಮಾನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ರಾಜ್ ನ್ಯೂಸ್‌ (Raj News) ಕಾರ್ಯನಿರ್ವಾಹಕ ರಾಜಾನುಕುಂಟೆ ವೆಂಕಟೇಶ್, ದಿವ್ಯ ತಮ್ಮ ಸಂದೇಶ್ ಸೇರಿ ಮೂವರನ್ನು ಈಗಾಗಲೇ ಬಂಧಿಸಿದ್ದಾರೆ.

ಸುಲಿಗೆ ಕೃತ್ಯಗಳಿಗೆ ವಾಟ್ಸ್ ಆಪ್‌ನಲ್ಲಿ ‘ಸೈ ರಿಸರ್ಚ್ ಟೀಂ’ (Sci Reaserch Team) ಹೆಸರಿನ ಗ್ರೂಪ್ ಅನ್ನು ವೆಂಕಟೇಶ್‌ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈ ಗ್ರೂಪ್‌ನಲ್ಲಿ ತಮ್ಮ ಕಾರ್ಯಸೂಚಿಗಳ ಬಗ್ಗೆ ಆರೋಪಿಗಳು ಚರ್ಚಿಸುತ್ತಿದ್ದರು. ಈ ಪ್ರಕರಣ ಹೊರ ಬರುತ್ತಿದ್ದಂತೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂತು. ಇಂದಿರಾ ನಗರದ 80 ಅಡಿ ರಸ್ತೆಯ ಮೈಕಲ್ ಪಾಳ್ಯ ಸಮೀಪದ ಸಹರಾ ಇಂಟರ್ ನ್ಯಾಷನಲ್ ಸ್ಪಾದ ವ್ಯವಸ್ಥಾಪಕ ಮಹೇಶ್ ಶೆಟ್ಟಿಗೆ ಬೆದರಿಸಿ 1 ಲಕ್ಷ ರು ಸುಲಿಗೆ ಮಾಡಿದ್ದು, ಈ ಬಗ್ಗೆ ವ್ಯವಸ್ಥಾಪಕ ನೀಡಿದ ದೂರಿನ ಮೇರೆಗೆ ರಾಜ್ ನ್ಯೂಸ್‌ ಸಿಇಒ ವೆಂಕಟೇಶ್ (CEO Venkatesh) ಹಾಗೂ ಇತರರ ವಿರುದ್ಧ ಇಂದಿರಾನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಎರಡೂ ಪ್ರಕರಣಗಳು ಇಂದಿರಾಗರದಲ್ಲಿ ನಡೆದಿದೆ.

ಏನಿದು ಪ್ರಕರಣ?
ರಹಸ್ಯ ಕಾರ್ಯಾಚರಣೆಯ ನೆಪದಲ್ಲಿ ಸ್ಪಾ ಮ್ಯಾನೇಜರ್ (Spa Manager) ಗೆ ಬ್ಲಾಕ್ ಮೇಲ್ ಮಾಡಿ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇರೆಗೆ ಪೊಲೀಸರು ಖಾಸಗಿ ಚಾನಲ್ ನ ಇಬ್ಬರು ಸಿಬ್ಬಂದಿಯನ್ನು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಅಲ್ಲದೇ, ಆರೋಪಿಗಳಿಗೆ ಸ್ನೇಹಿತೆ ದಿವ್ಯಾ ವಸಂತ ಎಂಬ ಯುವತಿ ಸಹಾಯ ಮಾಡಿರುವ ಆರೋಪ ಕೇಳಿ ಬಂದಿತ್ತು.

ವೀರಾಜ್ ಸ್ವಾಮಿ.ಎಂ✍🏻

Tags: ArrestbengaluruDivya VasanthakeralaRaj News

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.