ಆಂಧ್ರಪ್ರದೇಶ ಮಾಜಿ ಸಿಎಂ ಬಿಕ್ಕಿ ಬಿಕ್ಕಿ ಅತ್ತಿದ್ಯಾಕೆ ?

ಹೈದರಾಬಾದ್ ನ 20 : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು (Chandrababu Naidu) ವಿಜಯವಾಡದಲ್ಲಿ ನಡೆದ ಪತ್ರಿಕಾಗೋಷ್ಠಿಯ ವೇಳೆ ಭಾವುಕರಾಗಿದ್ದಾರೆ. ಎಲ್ಲರೆದುರೇ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತಮ್ಮ ವೈಯಕ್ತಿಕ ವಿಚಾರಗಳ ಬಗ್ಗೆ ನಡೆಸುತ್ತಿರುವ ದಾಳಿಯಿಂದ ತೀವ್ರ ನೊಂದಿರುವುದಾಗಿ ಹೇಳಿದ್ದಾರೆ. ಇದೇ ವೇಳೆ ತಾವು ಮತ್ತೆ ಅಧಿಕಾರಕ್ಕೆ ಬರುವವರೆಗೂ ಆಂಧ್ರ ಪ್ರದೇಶ ವಿಧಾನಸಭೆಗೆ (Andrapradesh Assembly)ಕಾಲಿಡುವುದಿಲ್ಲ ಎಂದು ಘೋಷಿಸಿದ್ದಾರೆ. 

ಇಂದು ಬೆಳಗ್ಗೆ ವಿಧಾನಸಭೆಯ ಕಲಾಪದಲ್ಲಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭಾಗವಹಿಸಿದ್ದರು. ಸದನ ಕಲಾಪದ ವೇಳೆ ವೈಯಕ್ತಿಕ ವಿಚಾರವಾಗಿ ದಾಳಿ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಇದೇ ವೇಳೆ ಆಡಳಿತ ಪಕ್ಷದ ವೈಎಸ್‌ಆರ್‌ಸಿಪಿಯ (YSRCP) ಶಾಸಕರು ತಮ್ಮ ಕುಟುಂಬ ಹಾಗೂ ಪತ್ನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಎಂದವರು ಹೇಳಿದ್ದಾರೆ. ಈ ಬಗ್ಗೆ ಪ್ರಸ್ತಾಪದ ವೇಲೆ, ತೀವ್ರ ಭಾವುಕರಾದ ಚಂದ್ರಬಾಬು ನಾಯ್ಡು ಅತ್ತಿದ್ದಾರೆ. 

ವೈಯಕ್ತಿಕ ದಾಳಿಯಿಂದ ನೊಂದ ಚಂದ್ರಬಾಬು ನಾಯ್ಡು ಅವರು ವಿಧಾನಸಭೆಯ ಕಲಾಪವನ್ನು ಮಧ್ಯದಲ್ಲೇ ಬಿಟ್ಟು ನೇರವಾಗಿ ಪಕ್ಷದ ಕೇಂದ್ರ ಕಚೇರಿಗೆ ತೆರಳಿದರು. ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಗಳನ್ನು ಕೇಳಿದಾಗ, ತಮ್ಮ ಭಾವನೆಗಳನ್ನು ನಿಯಂತ್ರಿಸುವುದು ಅವರಿಗೆ ಸಾಧ್ಯವಾಗಲಿಲ್ಲ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಪತ್ನಿಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ನನ್ನ ನಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಹೆಂಡತಿ ಎಂದಿಗೂ ರಾಜಕೀಯದಲ್ಲಿ ಆಸಕ್ತಿ ವಹಿಸಲಿಲ್ಲ.  ನಾನು ರಾಜಕೀಯದಲ್ಲಿ ಮುಂದೆ ಸಾಗಲು ನನಗೆ ಬೆಂಬಲವಾಗಿ  ನಿಂತಿದ್ದರು. ಆದರೆ ಇಂದು ಅವರ ಚರಿತ್ರೆಯ ಹರಣ  ಮಾಡಲಾಗಿದೆ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

Exit mobile version