ಮತ್ತೆ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು ! ಕೇಂದ್ರ ಸರ್ಕಾರದ ನೀತಿ ವಿರುದ್ಧ ಆಕ್ರೋಶ

Bengaluru: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ರಾಷ್ಟ್ರೀಯ ನೂತನ ಶಿಕ್ಷಣ ನೀತಿಗೆ(Anganwadi workers burst again) ಅನುಗುಣವಾಗಿ

ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಮಾನದಂಡವನ್ನು ಬದಲಾವಣೆ ಮಾಡಿರುವುದಕ್ಕೆ ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾನದಂಡದ ವಿರುದ್ದ ಹೋರಾಟ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

ಕೂಡಲೇ ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಮಾನದಂಡವನ್ನು ಬದಲಾವಣೆ ಮಾಡಿ, ಆದೇಶ ಹೊರಡಿಸಿರುವುದನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

ಈ ಕುರಿತು ಸರ್ಕಾರದೊಂದಿಗೆ ಮೊದಲ ಹಂತದಲ್ಲಿ ಮಾತುಕತೆ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲು ಸಮಯಾವಕಾಶ ಕೇಳಿದ್ದಾರೆ ಎನ್ನಲಾಗಿದೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯ ಸರ್ಕಾರ ನಿಗದಿಪಡಿಸಿರುವ ಹೊಸ ಮಾನದಂಡಗಳ ಪ್ರಕಾರ ಅಂಗನವಾಡಿ ಕಾರ್ಯಕರ್ತೆಯಾಗಲು ಕನಿಷ್ಠ ವಿದ್ಯಾರ್ಹತೆ ಪಿಯುಸಿ(PUC),

ಡಿಪ್ಲೋಮಾ(Diploma) ಆಗಿರಲೇಬೇಕು. ಅದೇ ರೀತಿ ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ(SSLC)

ಅಥವಾ ತತ್ಸಮಾನ ವಿದ್ಯಾರ್ಹತೆ (Anganwadi workers burst again)ಕಡ್ಡಾಯ ಎನ್ನಲಾಗಿದೆ ಇದೀಗ ಈ ಆದೇಶವನ್ನು ಹಿಂಪಡೆಯುವಂತೆ ಅಂಗನವಾಡಿ ಕಾರ್ಯಕರ್ತೆಯರು ಒತ್ತಾಯಿಸುತ್ತಿದ್ದಾರೆ.

ಅಂಗನವಾಡಿ ಶಿಕ್ಷಕಿಯರಿಗೆ ಕನಿಷ್ಠ ವಿದ್ಯಾರ್ಹತೆ ಪಿಯುಸಿ ಅಥವಾ ಡಿಪ್ಲೋಮಾ ಎಂದು ಕಡ್ಡಾಯ ಮಾಡಿರುವುದು ಸರಿಯಾಗಿದೆ.

ಇದನ್ನೂ ಓದಿ: https://vijayatimes.com/mangli-enter-in-cinema/

ಆದರೆ ಅಂಗನವಾಡಿ ಸಹಾಯಕಿಯರಿಗೆ ಎಸ್‍ಎಸ್‍ಎಲ್‍ಸಿ ಕಡ್ಡಾಯ ಎಂಬ ನಿಯಮ ಬೇಡ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘ ಒತ್ತಾಯಿಸಿದೆ. ಅನೇಕ ವರ್ಷಗಳಿಂದ ಕೆಲಸ ಮಾಡಿಕೊಂಡ ಬಂದ ಸಹಾಯಕಿಯರಿಗೆ ವಿದ್ಯಾರ್ಹತೆ ಕಡ್ಡಾಯ ಮಾಡದರೆ ಅವರು ಕೆಲಸ ಕಳೆದುಕೊಳ್ಳಬೇಕಾಗುತ್ತದೆ.

ಇನ್ನು ಕೆಲವರು ಬಡ್ತಿ ಪಡೆಯದೇ, ಹಾಗೆಯೇ ನಿವೃತ್ತಿ ಹೊಂದಬೇಕಾಗುತ್ತದೆ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರ ಹಿತ ಕಾಪಾಡಲು ರಾಜ್ಯ ಸರ್ಕಾರ ಈ ಆದೇಶ ಕೈಬಿಡಬೇಕು ಎಂಬ ಆಗ್ರಹಿಸಿದೆ.

ಇನ್ನು ರಾಜ್ಯ ಸರ್ಕಾರ ಹೊರಡಿಸಿರುವ ಈ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಈ ಆದೇಶದ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಈ ಕುರಿತು ಇದುವರೆಗೂ ಯಾವುದೇ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಂಡಿಲ್ಲ.

Exit mobile version