Visit Channel

ಸ್ಯಾಂಡಲ್‌ವುಡ್‌ಗೆ ಸೇರ್ಪಡೆಯಾದ ‘ಇಬ್ಬರ ನಡುವಿನ ಮುದ್ದಿನ ರಾಣಿ’

WhatsApp Image 2020-11-05 at 2.07.34 PM

ಕೊರೋನ ಆರ್ಭಟದಿಂದ ಮಂಕಾಗಿದ್ದ ಕನ್ನಡ ಚಲನಚಿತ್ರರಂಗ ಈಗ ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದೆ.  ಸಾಕಷ್ಟು ನೂತನ ಚಿತ್ರಗಳು ಕೆಲವು ದಿನಗಳಿಂದ ಆರಂಭವಾಗುತ್ತಿವೆ.‌ ಈ ಸಾಲಿಗೆ ಸೇರ್ಪಡೆಯಾಗಿರುವ ಮತ್ತೊಂದು ನೂತನ ಚಿತ್ರ ‘ಇಬ್ಬರ ನಡುವಿನ‌ ಮುದ್ದಿನ ರಾಣಿ’.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ದೊಡ್ಡಬಳ್ಳಾಪುರ ಬಳಿಯಿರುವ ಅಂಗಾಸನ ರೆಸಾರ್ಟ್ ನಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ವೈಎಸ್‌ಆರ್‌ಪಿಯ ರಾಜ್ಯ ಜಂಟಿ ಕಾರ್ಯದರ್ಶಿ  ಕರ್ಮೂರು ವೆಂಕಟ ರೆಡ್ಡಿ ಆರಂಭ ಫಲಕ ತೋರುವ ಮೂಲಕ ಚಾಲನೆ ‌ನೀಡಿದರು. ಕನ್ನಡ ‌ಹಾಗೂ ತೆಲುಗು  ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸೌರಭ್ ಕಿಶೋರ್ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಪಿ.ಎಂ.ಆರ್ ಕೋಣ್ಣಾರೆಡ್ಡಿ ಈ ಚಿತ್ರದ ಸಹ ನಿರ್ಮಾಪಕರು. ವಿಜಯ್ ಕುಮಾರ್ ಹಾಗೂ ಮಧುಬಾಬು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರೊಮ್ಯಾಂಟಿಕ್ ಲವ್ ಸ್ಟೋರಿ ಆಧಾರಿತ ಕಥಾಹಂದರ ಹೊಂದಿರುವ ಈ‌‌ ಚಿತ್ರವನ್ನು ಎಂ.ಎಸ್.ಎನ್ ರಾಜಾ ನಿರ್ದೇಶಿಸುತ್ತಿದ್ದಾರೆ.  ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ ಎಂಬುದು ತಿಳಿದು ಬಂದಿದೆ.

ಬೆಂಗಳೂರು, ದೊಡ್ಡಬಳ್ಳಾಪುರ, ಮಡಿಕೇರಿ ಮುಂತಾದ ಕಡೆ ೧೫ ‌ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ನಾಲ್ಕು ಹಾಡುಗಳಿರುವ ಈ‌ ಚಿತ್ರಕ್ಕೆ ಎಂ. ಎಂ. ಮೋಹನ್ ಸಂಗೀತ ನೀಡುತ್ತಿದ್ದಾರೆ. ಬಾಲು‌ ಸುರೇಶ್ ಛಾಯಾಗ್ರಹಣ, ಸತ್ಯಬಾಬು ಸಂಕಲನ ಹಾಗೂ ಭೂಪತಿ ಯಾದಗಿರಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ನಿರ್ಮಾಪಕ ಸೌರಭ್ ಕಿಶೋರ್ ಅವರು ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಆಕಾಶ್ ಆರಾಧ್ಯ, ದಿವ್ಯ ರಾವ್, ರೂಪ ರಾಯಪ್ಪ, ಸಂಜನ ನಾಯ್ಡು, ಮಹೇಂದರ್, ವಿಕ್ಚರಿ ವಾಸು, ಶೇಷಗಿರಿ, ಅಂಜಲಿ, ಲೋರ ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.

Latest News

Dakshina Kannada
ರಾಜ್ಯ

ಎಚ್ಚರ! ಅಪಾಯದಲ್ಲಿದೆ ದ.ಕ ಜಿಲ್ಲೆಯ ಬಂಟ್ವಾಳ ಕಿಂಡಿ ಅಣೆಕಟ್ಟು ಸೇತುವೆ

ಕಿಂಡಿ ಅಣೆಕಟ್ಟು ಹಾಗೂ ಸೇತುವೆಯ ಕಾಮಗಾರಿಯ ಕರ್ಮಕಾಂಡ. ಕಾಮಗಾರಿ ಪೂರ್ಣ ಆಗುವ ಮೊದಲೇ ತಡೆಗೋಡೆಯ ಕಾಮಗಾರಿಯ ಅಡಿಪಾಯನೇ ಕಿತ್ತು ಹೊರಗೆ ಬಂದಿದೆ!

BJP
ರಾಜಕೀಯ

ಬಿಜೆಪಿ ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ : ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕರಾವಳಿಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು(Praveen Nettaru) ಮನೆಗೆ ಮಾತ್ರ ಹೋಗಿ ಪರಿಹಾರ ಕೊಟ್ಟಿದ್ದಾರೆ.

Malyalam
ಮನರಂಜನೆ

ನಟನೆಯಲ್ಲಿ ಸೋಲನ್ನು ಕಂಡರೂ ಕುಗ್ಗದೆ, ಇಂದು ಭಾರತ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ನಟ ಫಹಾದ್ ಫಾಸಿಲ್!

ಫಹಾದ್ ಸಿನಿಮಾಗಳು ತಕ್ಕಮಟ್ಟಿಗೆ ಹಿಟ್ ಎನಿಸಿದರೂ, ಇವರ ಈಗಿನ ಸಿನಿಮಾ ಪ್ರಸಿದ್ಧಿಗೆ ಹೋಲಿಸಿದರೆ ಹಿಂದಿನ ಸಿನಿಮಾಗಳು ಏನೇನೂ ಆಗಿರಲಿಲ್ಲ.

Kabbadi Player
ದೇಶ-ವಿದೇಶ

ಪಲ್ಟಿ ಹೊಡೆಯುವ ಯತ್ನದಲ್ಲಿ ಕುಸಿದು ಬಿದ್ದು ಕಬಡ್ಡಿ ಆಟಗಾರ ಸಾವು! ; ವೀಡಿಯೋ ವೈರಲ್

ಕಬಡ್ಡಿ(Kabbadi) ಆಟಗಾರರೊಬ್ಬ ಸೋಮರ್ ಸಾಲ್ಟ್ ಹೊಡೆಯುತ್ತಿದ್ದಾಗ ಕುಸಿದು ಬಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ(Hospital) ಮೃತಪಟ್ಟಿದ್ದಾರೆ.