Anna Bhagya Yojana: Plan to Distribute 5kg of Rice and other Groceries instead of Cash
Bengaluru: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ (Annabhagya) ಇಷ್ಟು ದಿನಗಳ ಕಾಲ 10 ಕೆ.ಜಿ. ಅಕ್ಕಿ ಪೈಕಿ 05 ಕೆ.ಜಿ ಅಕ್ಕಿಗೆ ಬದಲಾಗಿ ನಗದು ನೀಡಲಾಗುತ್ತಿತ್ತು. ಆದರೆ ಮುಂದಿನ ದಿನಗಳಲ್ಲಿ ಜನರ ಇಷ್ಟದಂತೆ ದವಸ ಧಾನ್ಯಗಳು, ಇಲ್ಲವೇ ಅಡುಗೆ ಎಣ್ಣೆ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತು ಅಂತಿಮ ಹಂತದ ತಿರ್ಮಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಜೊತೆಗೆ ಚರ್ಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ (K H Muniyappa) ಹೇಳಿದ್ದಾರೆ. ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆಯು ಒಂದು. ಬಡವರಿಗೆ ಹತ್ತು ಕೆಜಿ ಅಕ್ಕಿಯನ್ನು ಈ ಗ್ಯಾರೆಂಟಿಯಡಿ (Guarantee) ನೀಡುವುದಾಗಿ ಘೋಷಿಸಿದ್ದ ರಾಜ್ಯ ಸರ್ಕಾರವು ಐದು ಕೆ.ಜಿ. ಅಕ್ಕಿಯನ್ನು ನೀಡುತ್ತಿದೆ.
ಉಳಿದ ಐದು ಕೆ.ಜಿ. ಅಕ್ಕಿಯ ಬದಲಾಗಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ನಗದು ಹಣ ಹಾಕುತ್ತಿತ್ತು.ಆದರೆ ರಾಜ್ಯ ಸರಕಾರ ನಡೆಸಿದ ಸಮೀಕ್ಷೆಯಲ್ಲಿ ಶೇ 93ರಷ್ಟು ಫಲಾನುಭವಿಗಳು ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯ (Rice) ಬದಲಿಗೆ 5 ಕೆಜಿ ಅಕ್ಕಿ ಜತೆಗೆ ಇತರೆ ಅಗತ್ಯ ವಸ್ತುಗಳನ್ನು ಪಡೆಯಲು ಆಸಕ್ತಿ ತೋರಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.
Anna Bhagya Scheme Latest News Vijayatimes Kannada
ಬಡತನ ರೇಖೆಗಿಂತ ಕೆಳಗಿರುವ (BPL) ಪಡಿತರ ಕಾರ್ಡ್ ಹೊಂದಿರುವವರಿಗೆ ಉಚಿತ ಅಕ್ಕಿ ವಿತರಿಸಲಾಗುತ್ತಿದ್ದು, ಕರ್ನಾಟಕದಲ್ಲಿ 13 ಲಕ್ಷ ಕಾರ್ಡ್ಗಳಿವೆ ಎಂದು ವಿವರಿಸಿದರು. ಈ ಯೋಜನೆಯಡಿ 50 ಲಕ್ಷಕ್ಕೂ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ. ಅವರ ಅಗತ್ಯಗಳನ್ನು ಪೂರೈಸಲು, ರಾಜ್ಯಕ್ಕೆ ಪ್ರತಿ ತಿಂಗಳು 20 ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಎಫ್ಸಿಐ (FCI)ಯಲ್ಲಿ ಕೆಜಿಗೆ 34 ರೂ.ನಂತೆ ಅಕ್ಕಿ ನೀಡಲಾಗುತ್ತಿದೆ. ಆದರೆ ಈಗ ಕೇಂದ್ರದಿಂದ ಕೆಜಿಗೆ 28 ರೂ.ಗೆ ಖರೀದಿಸುವಂತೆ ಸಂಬಂಧಪಟ್ಟ ಸಚಿವರಾದ ಜೋಶಿ ಅವರೊಂದಿಗೆ ಚರ್ಚಿಸಿದ್ದೇನೆ. ರಾಜ್ಯ ಸರ್ಕಾರದ ಅವಶ್ಯಕತೆಗೆ ಅನುಗುಣವಾಗಿ ಅಕ್ಕಿ ಖರೀದಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
Under the Annabhagya Yojana, an ambitious project of the Karnataka Congress government, 10 Kg. Out of rice, 05 kg of rice was given in cash. But in the coming days, the state government is thinking of giving davasa grains or cooking oil as per the people's choice.
Minister for Food and Civil Supplies K H Muniyappa said that this will be discussed with Chief Minister Siddaramaiah for final decision. Annabhagya Yojana is one of the five guarantee schemes of the state government. The state government had announced to give ten kg of rice to the poor under this guarantee, five kg. Serving rice.
The remaining five kg. Instead of rice, cash was deposited directly into the bank account of the eligible beneficiaries. However, in a survey conducted by the state government, 93% of the beneficiaries showed interest in getting 5 kg of rice along with other essential items instead of 5 kg of rice, Food and Civil Supplies Minister KH Muniyappa said.
He explained that free rice is being distributed to Below Poverty Line (BPL) ration card holders and there are 13 lakh cards in Karnataka. More than 50 lakh people are beneficiaries under this scheme. To meet their needs, the state needs 20 metric tonnes of rice every month, he informed.
Rice is being offered at Rs 34 per kg in FCI. But now I have discussed with the concerned minister Joshi to buy from the center at Rs 28 per kg. He said that we will buy rice as per the requirement of the state government.