ಬೆಂಗಳೂರು, ಡಿ. 07: ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊಸ ರಾಜಕೀಯ ಪಕ್ಷದೊಂದಿಗೆ ರಾಜಕೀಯ ಅಖಾಡಕ್ಕಿಳಿಯುವದಾಗಿ ಘೋಷಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್, ಭಾನುವಾರ ತಮ್ಮ ಅಣ್ಣನನ್ನು ಭೇಟಿಯಾಗಿ ಆಶಿರ್ವಾದ ಪಡೆದಿದ್ದಾರೆ.
ಬೆಂಗಳೂರಿನಲ್ಲಿರುವ ತಮ್ಮ ಅಣ್ಣಾ, ಸತ್ಯನಾರಾಯಣ ಅವರ ನಿವಾಸಕ್ಕೆ ತೆರಳಿದ ರಜನಿಕಾಂತ್, ಅವರ ಕಾಲಿಗೆ ನಮಸ್ಕರಿಸಿ ಆಶಿರ್ವಾದ ಪಡೆದರು. ಡಿ.3ರಂದು ತಮ್ಮ ರಾಜಕೀಯ ಪ್ರವೇಶದ ಕುರಿತು ಘೋಷಣೆ ಮಾಡಿದ್ದ ಸೂಪರ್ ಸ್ಟಾರ್, ಜನವರಿಯಲ್ಲಿ ಹೊಸ ಪಕ್ಷ ಘೋಷಣೆ ಮಾಡುವುದಾಗಿ ತಿಳಿಸಿದ್ದರು.