Bangalore : ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳನ್ನು(Announcing New year guidelines) ಬೆಂಗಳೂರು ಪೊಲೀಸರು ಪ್ರಕಟಿಸಿದ್ದಾರೆ.
ಪೊಲೀಸರು ನೀಡಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬೆಂಗಳೂರು ಪೊಲೀಸರು ನೀಡಿದ್ದಾರೆ.

ಹೊಸ ವರ್ಷ ಆಚರಣೆ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾದ್ಯಮಗಳೊಂದಿಗೆ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ (Pratap Reddy), ಹೊಸ ವರ್ಷದಂದು ನಗರದಲ್ಲಿ ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಬಂದೋಬಸ್ತವಾಗಿ 8500 ಸಿಬ್ಬಂದಿಯನ್ನು ನಿಯೋಜನೆ (Announcing New year guidelines) ಮಾಡಲಾಗಿದೆ.
ಅದರೊಂದಿಗೆ ನಗರದಾದ್ಯಂತ ಸಿಸಿಟಿವಿ (CCTV) ಕ್ಯಾಮರಾಗಳನ್ನು ಕೂಡಾ ಹೆಚ್ಚುವರಿಯಾಗಿ ಅಳವಡಿಸಲಾಗಿದೆ. ಟ್ರಾಫಿಕ್ ನಿಯಂತ್ರಣಕ್ಕಾಗಿ ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಇನ್ನು ಈ ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಡಿಸಿಪಿ (DCP) ಸಂದೀಪ್ ಪಾಟೀಲ್, ಸಂಚಾರಿ ಮುಖ್ಯಸ್ಥ ಸಲೀಂ, ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಇದನ್ನೂ ಓದಿ : https://vijayatimes.com/state-bjp-tweeted-jds/
ಪೊಲೀಸರು ನೀಡಿರುವ ಮಾರ್ಗಸೂಚಿಗಳು ಇಂತಿವೆ :
- ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ(ACP) ಮಟ್ಟದಲ್ಲಿ ತಂಡ ರಚನೆ ಮಾಡಲಾಗಿದೆ. ಶಬ್ದ ಮಾಲಿನ್ಯ ಮಾಡಿದವರ ವಿರುದ್ದ ಕಾನೂನು ಕ್ರಮ.
- ರಾತ್ರಿ 9 ಗಂಟೆಯ ಬಳಿಕ ಇಂಟರ್ ನ್ಯಾಶನಲ್ ಏರ್ ಪೋರ್ಟ್ ಪ್ಲೈಓವರ್ ಹೊರತು ಪಡಿಸಿ ಎಲ್ಲಾ ಪ್ಲೈ ಓವರ್ ಬಂದ್ ಮಾಡಲಾಗುವುದು.
- ಪರವಾನಿಗೆ ಇರುವ ಪಿಸ್ತೂಲ್, ರಿವಾಲ್ವರ್ ಗಳನ್ನು ಸಂಭ್ರಮಾಚರಣೆ ಸ್ಥಳಕ್ಕೆ ತರುವಂತಿಲ್ಲ .
- ರಸ್ತೆಯ ಬದಿಯಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಬೇಕು.
- ನಗರದಾದ್ಯಂತ ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಲಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು.
- ಮಧ್ಯರಾತ್ರಿ 1 ಗಂಟೆಯ ತನಕ ಮಾತ್ರ ಸಂಭ್ರಮಾಚರಣೆಗೆ ಅವಕಾಶ.

- ರಸ್ತೆ ಮದ್ಯದಲ್ಲಿ ಸಂಭ್ರಮ ಆಚರಣೆ ಮಾಡಬಾರದು.
- ಸಾರ್ವಜನಿಕರು ಹೆಚ್ಚಾಗಿ ಪಬ್ಲಿಕ್ ವೆಹಿಕಲ್ ಬಳಸಬೇಕು.
- ಬಿಎಂಟಿಸಿ, ಮೆಟ್ರೋ ಎರಡು ಕೂಡ ಕಾರ್ಯ ನಿರ್ವಹಿಸುತ್ತವೆ.
- ಎಲಿವೇಟೆಡ್ ರಸ್ತೆಯಲ್ಲಿ 9 ಗಂಟೆಯ ನಂತರ ಸಂಚಾರಕ್ಕೆ ಅವಕಾಶ ಇಲ್ಲ.
- ರಾತ್ರಿ 9 ಗಂಟೆಯ ನಂತರ ನೈಸ್ ರೋಡ್ ನಲ್ಲಿ ದ್ವಿಚಕ್ರ ವಾಹನಗಳಿವೆ ಅವಕಾಶವಿಲ್ಲ.